ADVERTISEMENT

IND vs BAN 2ND ODI: ಭಾರತದ ವಿರುದ್ಧ ಬಾಂಗ್ಲಾಗೆ ರೋಚಕ ಜಯ, ಸರಣಿ ಕೈವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಡಿಸೆಂಬರ್ 2022, 14:39 IST
Last Updated 7 ಡಿಸೆಂಬರ್ 2022, 14:39 IST
ರೋಹಿತ್ ಶರ್ಮಾ ಬ್ಯಾಟಿಂಗ್ ವೈಖರಿ
ರೋಹಿತ್ ಶರ್ಮಾ ಬ್ಯಾಟಿಂಗ್ ವೈಖರಿ   

ಮೀರಪುರ್: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸಂಘಟಿತ ಹೋರಾಟ ನಡೆಸಿದ ಬಾಂಗ್ಲಾದೇಶ, 5 ರನ್‌ ಅಂತರದಿಂದ ಗೆಲುವು ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಮೆಹದಿ ಹಸನ್ ಮಿರಾಜ್ ಶತಕ ಹಾಗೂ ಮೆಹಮೂದ್ ಉಲ್ಲಾಹ ಅರ್ಧಶತಕ ಬಲದಿಂದ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 271 ರನ್ ಗಳಿಸಿತ್ತು.

ಈ ಗುರಿ ಬೆನ್ನತ್ತಿದ ಭಾರತ ಬ್ಯಾಟಿಂಗ್ ವೈಫಲ್ಯ ಎದುರಿಸಿತು. ಆರಂಭಿಕ ಆಟಗಾರರಾದ ಶಿಖರ್ ಧವನ್ 8, ವಿರಾಟ್‌ ಕೊಹ್ಲಿ 5 ರನ್ ಗಳಿಸಿ ಬೇಗ ಔಟಾದರು. ಬಳಿಕ ಕ್ರೀಸ್‌ಗೆ ಬಂದ ವಾಷಿಂಗ್ಟನ್ ಸುಂದರ್ 11, ಕೆ.ಎಲ್.ರಾಹುಲ್ 14 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು.

ADVERTISEMENT

ಶ್ರೇಯಸ್‌ ಐಯ್ಯರ್ 82, ಅಕ್ಷರ್ ಪಟೇಲ್ 56, ರೋಹಿತ್ ಶರ್ಮಾ ಔಟಾಗದೆ 51 ರನ್ ಗಳಿಸಿ ಉತ್ತಮ ಆಟವಾಡಿದರಾದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 266 ರನ್ ಗಳಿಸಿ ಸೋಲು ಕಂಡಿತು.

ಬಾಂಗ್ಲಾ ಪರ ಇಬಾದತ್ ಹುಸೇನ್ ಚೌಧರಿ 3, ಮೆಹದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ ತಲಾ ಎರಡು ವಿಕೆಟ್ ಪಡೆದರೆ, ಮುಸ್ತಫಿಜುರ್ ರೆಹಮಾನ್ ಹಾಗೂ ಮೆಹಮೂದ್ ಉಲ್ಲಾಹ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2–0ರಲ್ಲಿ ಬಾಂಗ್ಲಾದೇಶ ಕೈವಶ ಮಾಡಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.