ಕ್ರಿಕೆಟ್
(ಸಾಂಕೇತಿಕ ಚಿತ್ರ)
ಅಬುಧಾಬಿ: ಹಾಂಗ್‌ಕಾಂಗ್ ವಿರುದ್ಧ ಸುಲಭ ಗೆಲುವು ಸಾಧಿಸಿದ ಬಾಂಗ್ಲಾದೇಶ ತಂಡವು ಏಷ್ಯಾ ಕಪ್ ಟೂರ್ನಿಯಲ್ಲಿ ಶನಿವಾರ ಆರು ಬಾರಿಯ ಚಾಂಪಿಯನ್ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ನಾಯಕ ಲಿಟನ್ ದಾಸ್ ಅವರ ಅರ್ಧಶತಕದ ಬಲದಿಂದ ಬಾಂಗ್ಲಾದೇಶ ತಂಡವು ಗುರುವಾರ ನಡೆದ ತನ್ನ ಮೊದಲ ಪಂದ್ಯದಲ್ಲಿ ಏಳು ವಿಕೆಟ್‌ಗಳಿಂದ ‘ಅನನುಭವಿ’ ಹಾಂಗ್‌ಕಾಂಗ್ ತಂಡವನ್ನು ಮಣಿಸಿ, ಶುಭಾರಂಭ ಮಾಡಿತ್ತು.
ಚರಿತ್ ಅಸಲಂಕಾ ನಾಯಕತ್ವದ ಲಂಕಾ ಪಡೆಯು ಗೆಲುವಿನೊಡನೆ ಅಭಿಯಾನ ಆರಂಭಿಸುವ ಛಲದಲ್ಲಿದೆ. ಗಾಯದಿಂದ ಚೇತರಿಸಿಕೊಂಡಿರುವ ಸ್ಪಿನ್ನರ್ ವನಿಂದು ಹಸರಂಗ ಮರಳಿರುವುದು ತಂಡದ ಬಲವನ್ನು ಹೆಚ್ಚಿಸಿದೆ.
ಪಂದ್ಯ ಆರಂಭ: ರಾತ್ರಿ 8
ನೇರಪ್ರಸಾರ: ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.