ಬೆಂಗಳೂರು: ನಗರದ ರಾಮಯ್ಯ ತಾಂತ್ರಿಕ ಕಾಲೇಜಿನ ಪುರುಷರ ತಂಡವು ಗೋವಾದಲ್ಲಿ ಸೋಮವಾರ ಮುಕ್ತಾಯಗೊಂಡ ಅಖಿಲ ಭಾರತ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ರಾಮಯ್ಯ ತಂಡವು ಫೈನಲ್ ಹಣಾಹಣಿಯಲ್ಲಿ 75–57ರಿಂದ ನಾಗ್ಪುರದ ವಿಶ್ವೇಶ್ವರಯ್ಯ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯನ್ನು ಮಣಿಸಿತು. ಜೋಶುವಾ 22, ಕನಿಷ್ಕ 16 ಮತ್ತು ಪ್ರಾಣೇಶ್ 15 ಅಂಕಗಳನ್ನು ರಾಮಯ್ಯ ತಂಡದ ಪರ ಗಳಿಸಿದರು.
ಗೋವಾದ ಪಿಲಾನಿ ಬಿಐಟಿಎಸ್ ಕ್ಯಾಂಪಸ್‌ನಲ್ಲಿ ಮಾರ್ಚ್ 27ರಿಂದ ಐದು ದಿನ ನಡೆದ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ತಂಡಗಳು ಭಾಗವಹಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.