ತೆಂಬಾ ಬವುಮಾ
ಜೊಹಾನೆಸ್‌ಬರ್ಗ್: ದಕ್ಷಿಣ ಆಫ್ರಿಕಾ ಟೆಸ್ಟ್ ತಂಡದ ನಾಯಕ ತೆಂಬಾ ಬವುಮಾ ಅವರು ಈ ತಿಂಗಳ ಕೊನೆಯಲ್ಲಿ ಭಾರತ ಪ್ರವಾಸ ಕೈಗೊಳ್ಳುವ ದೇಶದ ‘ಎ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇದರಿಂದ ನವೆಂಬರ್ 14 ರಂದು ಭಾರತ ವಿರುದ್ಧ ಆರಂಭವಾಗುವ ಎರಡು ಟೆಸ್ಟ್‌ಗಳ ಸರಣಿಗೆ ಮೊದಲು ಒಗ್ಗಿಕೊಳ್ಳಲು ಅವರಿಗೆ ಸಾಧ್ಯವಾಗಲಿದೆ.
ಮೀನಖಂಡದ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಬವುಮಾ ಪಾಕಿಸ್ತಾನ ವಿರುದ್ಧ ಹಾಲಿ ಟೆಸ್ಟ್ ಸರಣಿಯಲ್ಲಿ ಆಡಿರಲಿಲ್ಲ. ಪೂರ್ಣ ಗುಣಮುಖರಾಗಲು ಅವರನ್ನು ಏಕದಿನ ಸರಣಿಗೂ ಆಯ್ಕೆ ಮಾಡಿರಲಿಲ್ಲ.
‘ಎ’ ತಂಡವು ಅಕ್ಟೋಬರ್ 30 ರಿಂದ ನವೆಂಬರ್ 9ರ ಅವಧಿಯಲ್ಲಿ ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ನಾಲ್ಕು ದಿನಗಳ ಅವಧಿಯ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರ ಜೊತೆಗೆ ರಾಜಕೋಟ್‌ನಲ್ಲಿ ನವೆಂಬರ್ 13 ರಿಂದ 19ರವರೆಗಿನ ಅವಧಿಯಲ್ಲಿ ಮೂರು ಏಕದಿನ ಪಂದ್ಯಗಳನ್ನೂ ಆಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.