ADVERTISEMENT

ಪಾಕ್‌ನಲ್ಲಿ ಟೆಸ್ಟ್: ಬಾಂಗ್ಲಾ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 19:40 IST
Last Updated 18 ಡಿಸೆಂಬರ್ 2019, 19:40 IST

ಕರಾಚಿ: ಪಾಕಿಸ್ತಾನದಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಲು ತಂಡವನ್ನು ಕಳುಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಟ್ವೆಂಟಿ–20 ಪಂದ್ಯಗಳಲ್ಲಿ ತಂಡ ಆಡಲಿದೆ ಎಂದು ತಿಳಿಸಿದೆ.

ಮುಂದಿನ ವರ್ಷದ ಜನವರಿ ಮತ್ತು ಫೆಬ್ರುವರಿಯಲ್ಲಿ ಟೆಸ್ಟ್ ಪಂದ್ಯಗಳನ್ನು ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಬಾಂಗ್ಲಾದೇಶ ಆಡಲು ನಿರಾಕರಿಸಿರುವುಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬೇಸರ ವ್ಯಕ್ತಪಡಿಸಿದೆ. ಬಾಂಗ್ಲಾದೇಶ ಈ ನಿರ್ಧಾರಕ್ಕೆ ಬರಲು ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದೆ.

’ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಶ್ರೀಲಂಕಾ ತಂಡದೊಂದಿಗೆ ಬಿಸಿಸಿಐ ಅಧಿಕಾರಿಗಳೂ ಬಂದಿದ್ದಾರೆ. ಇಲ್ಲಿನ ಪರಿಸ್ಥಿತಿಯನ್ನು ಅವರು ಅವಲೋಕಿಸುತ್ತಿದ್ದಾರೆ. ಆದ್ದರಿಂದ ಬಾಂಗ್ಲಾದೇಶ ಆಡಲು ನಿರಾಕರಿಸಿರುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ವಾಸಿಂ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.