ADVERTISEMENT

IPL 2022: ಐಪಿಎಲ್ ವೇಳಾಪಟ್ಟಿ ಪ್ರಕಟ; ಚೆನ್ನೈ vs ಕೋಲ್ಕತ್ತ ಮೊದಲ ಹಣಾಹಣಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2022, 14:04 IST
Last Updated 6 ಮಾರ್ಚ್ 2022, 14:04 IST
ಐಪಿಎಲ್ ಟ್ರೋಫಿ
ಐಪಿಎಲ್ ಟ್ರೋಫಿ   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಪ್ರಕಟಿಸಿದೆ.

ಐಪಿಎಲ್ 15ನೇ ಆವೃತ್ತಿಯು ಮಾರ್ಚ್ 26ರಂದು ಆರಂಭವಾಗಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

65 ದಿನಗಳ ಪರ್ಯಂತ ಸಾಗಲಿರುವ ಟೂರ್ನಿಯಲ್ಲಿ 70 ಲೀಗ್ ಪಂದ್ಯಗಳು ಮತ್ತು ನಾಲ್ಕು ಪ್ಲೇ-ಆಫ್ ಪಂದ್ಯಗಳು ನಿಗದಿಯಾಗಿವೆ.

ADVERTISEMENT

ಮಾರ್ಚ್ 27ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ. ಈ ಪಂದ್ಯವು ರಾತ್ರಿ 7.30ಕ್ಕೆ ಸರಿಯಾಗಿ ಆರಂಭವಾಗಲಿದೆ.

ಒಟ್ಟು 12 ಡಬಲ್ ಹೆಡರ್ (ದಿನಕ್ಕೆ ಎರಡು ಪಂದ್ಯಗಳು) ಪಂದ್ಯಗಳು ಇರಲಿವೆ.

ಸಮಯ:
ರಾತ್ರಿಯ ಪಂದ್ಯಗಳು ಭಾರತೀಯ ಕಾಲಮಾನ 7.30 ಹಾಗೂ ಸಂಜೆ ಪಂದ್ಯಗಳು 3.30ಕ್ಕೆ ಸರಿಯಾಗಿ ಆರಂಭವಾಗಲಿವೆ.

ಫೈನಲ್ ಸೇರಿದಂತೆ ಪ್ಲೇ-ಆಫ್ ಪಂದ್ಯಗಳ ವೇಳಾಪಟಿಯನ್ನು ನಂತರ ಘೋಷಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.