ADVERTISEMENT

ಐಸಿಸಿ ಮಹಿಳಾ ವಿಶ್ವಕಪ್‌ ಹಾಗೂ ನ್ಯೂಜಿಲೆಂಡ್ ಸರಣಿಗೆ ಭಾರತ ತಂಡ ಪ್ರಕಟ

ಐಎಎನ್ಎಸ್
Published 6 ಜನವರಿ 2022, 6:35 IST
Last Updated 6 ಜನವರಿ 2022, 6:35 IST
ಭಾರತೀಯ ಮಹಿಳಾ ಕ್ರಿಕೆಟ್ ತಂಡ -ಪಿಟಿಐ ಚಿತ್ರ
ಭಾರತೀಯ ಮಹಿಳಾ ಕ್ರಿಕೆಟ್ ತಂಡ -ಪಿಟಿಐ ಚಿತ್ರ   

ನವೆದಹಲಿ: ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಮಹಿಳಾ ವಿ‌ಶ್ವಕಪ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಪ್ರಕಟಿಸಿದೆ.

ವಿಶ್ವಕಪ್ ಟೂರ್ನಿಯಲ್ಲಿ ಮಿಥಾಲಿ ರಾಜ್ ನಾಯಕತ್ವದ ಟೀಮ್‌ ಇಂಡಿಯಾ ಮಾರ್ಚ್‌ 6ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಗೆಲುವಿಗಾಗಿ ಹೋರಾಟ ನಡೆಸಲಿದೆ.

ಇದಕ್ಕೂ ಮುನ್ನ ನ್ಯೂಜಿಲೆಂಡ್‌ ವಿರುದ್ಧ ಫೆಬ್ರುವರಿ 9ರಂದು ಟಿ–20 ಪಂದ್ಯ ಹಾಗೂ ಫೆ.11ರಿಂದ 5 ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ.

ADVERTISEMENT

ಏಕದಿನ ಸರಣಿಗೆ ಆಯ್ಕೆಯಾಗಿರುವ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್

ಟಿ–20 ಪಂದ್ಯಕ್ಕೆ ಆಯ್ಕೆಯಾಗಿರುವ ಟೀಮ್ ಇಂಡಿಯಾ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪ ನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್ ), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್, ಏಕ್ತಾ ಬಿಷ್ಟ್, ಎಸ್. ಮೇಘನಾ, ಸಿಮ್ರಾನ್ ದಿಲ್ ಬಹದ್ದೂರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.