ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಮಹಿಳಾ ಪ್ರೀಮಿಯರ್ ಲೀಗ್(ಡಬ್ಲ್ಯುಪಿಎಲ್) ಅಸಾಧಾರಣವಾಗಿ ಬೆಳೆದಿದೆ. ಆದರೆ, ಅಸ್ತಿತ್ವದಲ್ಲಿರುವ ಐದು ತಂಡಗಳ ಸಂಖ್ಯೆಯನ್ನು ಹೆಚ್ಚಿಸುವ ಯಾವುದೇ ತಕ್ಷಣದ ಯೋಜನೆಗಳಿಲ್ಲ ಎಂದು ಡಬ್ಲ್ಯುಪಿಎಲ್ ಸಮಿತಿಯ ಸದಸ್ಯರೂ ಆಗಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಎಂದು ಹೇಳಿದ್ದಾರೆ.
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ನೇತೃತ್ವದ ಡಬ್ಲ್ಯುಪಿಎಲ್ ಸಮಿತಿಯು ಮೂರು ಋತುಗಳ ನಂತರ ತಂಡಗಳ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯನ್ನು ಹೊಂದಿತ್ತು. ಆದರೆ, ಈಗ ಪಂದ್ಯಾವಳಿಯ ಬೆಳವಣಿಯತ್ತ ಗಮನ ಕೇಂದ್ರೀಕರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಸದ್ಯಕ್ಕೆ ಯಾವುದೇ ತಂಡವನ್ನು ಸೇರಿಸುವ ಬಗ್ಗೆ ನಾವು ನಿರ್ಧಾರ ತೆಗೆದುಕೊಳ್ಳುವ ಮೊದಲು ಈ ಪಂದ್ಯಾವಳಿಯನ್ನು ಮತ್ತಷ್ಟು ಬಲಪಡಿಸಲು ಬಯಸುತ್ತೇವೆ ಎಂದು ಧುಮಾಲ್ ತಿಳಿಸಿದ್ದಾರೆ.
ಪಂದ್ಯಾವಳಿಯ ಬೆಳವಣಿಗೆಯಿಂದ ಧುಮಾಲ್ ತೃಪ್ತರಾಗಿದ್ದಾರೆ.
‘ಡಬ್ಲ್ಯುಪಿಎಲ್ ಮತ್ತಷ್ಟು ಬೆಳೆಯುತ್ತಲೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಇದರಿಂದ ಪಂದ್ಯಾವಳಿಗೆ ಮಾತ್ರವಲ್ಲದೆ ಒಟ್ಟಾರೆಯಾಗಿ ಮಹಿಳಾ ಕ್ರಿಕೆಟ್‌ಗೆ ತುಂಬಾ ಒಳ್ಳೆಯದಾಗುತ್ತದೆ’ ಎಂದು ಅವರು ಹೇಳಿದ್ದಾರೆ.
ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಎರಡನೇ ಬಾರಿಗೆ ಡಬ್ಲ್ಯುಪಿಎಲ್ ಟ್ರೋಫಿ ಗೆದ್ದಿದೆ.
ಡಬ್ಲ್ಯುಪಿಎಲ್‌ನ ಐದು ತಂಡಗಳ ಮಾರಾಟದಿಂದ ಬಿಸಿಸಿಐ ₹4670 ಕೋಟಿ ಆದಾಯ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.