ADVERTISEMENT

ಎನ್‌ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಆಹ್ವಾನ: ದ್ರಾವಿಡ್ ಮತ್ತೆ ಅರ್ಜಿ ಸಲ್ಲಿಕೆ?

ಪಿಟಿಐ
Published 10 ಆಗಸ್ಟ್ 2021, 11:53 IST
Last Updated 10 ಆಗಸ್ಟ್ 2021, 11:53 IST
ರಾಹುಲ್‌ ದ್ರಾವಿಡ್‌
ರಾಹುಲ್‌ ದ್ರಾವಿಡ್‌    

ನವದೆಹಲಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು(ಬಿಸಿಸಿಐ) ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

2019ರ ಜುಲೈನಲ್ಲಿ 19 ವರ್ಷದೊಳಗಿನವರ ಕ್ರಿಕೆಟ್‌ ತಂಡದ ಕೋಚ್‌ ಆಗಿ ನೇಮಕಗೊಂಡಿದ್ದರು. ಬಳಿಕ 2020ರಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ರಾಹುಲ್‌ ಮಾರ್ಗದರ್ಶನದ ತಂಡ ಉತ್ತಮ ಪ್ರದರ್ಶನ ತೋರಿತ್ತು.

ಸದ್ಯ ಎರಡು ವರ್ಷಗಳ ಒಪ್ಪಂದದ ಅವಧಿ ಮುಗಿದಿದ್ದು, ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ದ್ರಾವಿಡ್‌ ಅವರು ಮತ್ತೆ ಎರಡು ವರ್ಷಗಳ ಅವಧಿ ವಿಸ್ತರಣೆಗಾಗಿ ಮರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದೇ ಆಗಸ್ಟ್‌ 15ರಂದು ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.

ADVERTISEMENT

ದ್ರಾವಿಡ್, ಎನ್‌ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ, ಟಿ-20 ವಿಶ್ವಕಪ್‌ ಬಳಿಕ ಹಿರಿಯರ ತಂಡದ ಮುಖ್ಯ ಕೋಚ್‌ ರವಿಶಾಸ್ತ್ರಿ ಅವರ ಅಧಿಕಾರಾವಧಿ ನವೆಂಬರ್‌ಗೆ ಕೊನೆಗೊಳ್ಳಲಿದೆ. ಹಾಗಾಗಿ ರಾಹುಲ್ ಅವರನ್ನು ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಏಕದಿನ ಹಾಗೂ ಸೀಮಿತ ಓವರ್‌ ಟೂರ್ನಿಯಲ್ಲಿ ದ್ರಾವಿಡ್ ಅವರು ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.