ಅಭಿಷೇಕ್ ನಾಯರ್ ಹಾಗೂ ದಿಲೀಪ್
– ಪಿಟಿಐ ಚಿತ್ರಗಳು
ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡದ ಹಲವು ಸಹಾಯಕ ಸಿಬ್ಬಂದಿಯನ್ನು ಬಿಸಿಸಿಐ ವಜಾ ಮಾಡಿದೆ.
ಸಹಾಯಕ ಕೋಚ್ ಅಭಿಷೇಕ್ ನಾಯರ್, ಫೀಲ್ಡಿಂಗ್ ಕೋಚ್ ಟಿ. ದಿಲೀಪ್, ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಇನ್ನೊಬ್ಬ ಸಿಬ್ಬಂದಿಯನ್ನೂ ವಜಾ ಮಾಡಲಾಗಿದೆ ಎಂದು ಹೇಳಲಾಗಿದೆ.
ಟಿ. ದಿಲೀಪ್ ಹಾಗೂ ದೇಸಾಯಿ ಮೂರು ವರ್ಷದಿಂದ ತಂಡದ ಸಿಬ್ಬಂದಿ ವರ್ಗದಲ್ಲಿದ್ದಾರೆ. ನಾಯರ್ ನೇಮಕವಾಗಿ ಕೇವಲ 8 ತಿಂಗಳಷ್ಟೇ ಆಗಿದೆ.
ಕಳೆದ ವರ್ಷ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ತಂಡದ ಹೀನಾಯ ಪ್ರದರ್ಶನಕ್ಕೆ ಈ ತಲೆದಂಡವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.