ADVERTISEMENT

ಬಿಸಿಸಿಐ 19 ವರ್ಷದೊಳಗಿನವರ ಮಹಿಳಾ ಟಿ20 ಕ್ರಿಕೆಟ್‌: ನಾಲ್ಕರಘಟ್ಟಕ್ಕೆ ಕರ್ನಾಟಕ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 14:28 IST
Last Updated 20 ನವೆಂಬರ್ 2023, 14:28 IST
<div class="paragraphs"><p>ಕರ್ನಾಟಕ ಬಾಲಕಿಯರ ತಂಡದವರು.</p></div>

ಕರ್ನಾಟಕ ಬಾಲಕಿಯರ ತಂಡದವರು.

   

ಬೆಂಗಳೂರು: ಕರ್ನಾಟಕ ತಂಡದವರು ಬಿಸಿಸಿಐ 19 ವರ್ಷದೊಳಗಿನವರ ಮಹಿಳಾ ಟಿ20 ಕ್ರಿಕೆಟ್‌ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಮಧ್ಯಪ್ರದೇಶ ತಂಡವನ್ನು 6 ರನ್‌ಗಳಿಂದ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದರು.

ಹಿಮಾಚಲಪ್ರದೇಶದ ಊನಾದಲ್ಲಿರುವ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ, 20 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 126 ರನ್‌ ಕಲೆಹಾಕಿತು. ಗುರಿ ಬೆನ್ನಟ್ಟಿದ ಮಧ್ಯಪ್ರದೇಶ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 120 ರನ್‌ ಗಳಿಸಲಷ್ಟೇ ಶಕ್ತವಾಯಿತು.

ADVERTISEMENT

ನಿಕಿ ಪ್ರಸಾದ್‌ (42 ರನ್‌), ಎಚ್‌.ಭವಿಕಾ ರೆಡ್ಡಿ (27 ರನ್‌), ಶ್ರೀನಿಧಿ (20ಕ್ಕೆ 2) ಅವರು ಕರ್ನಾಟಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.