ದುಬೈ: ಬಿಸಿಸಿಐ ಉಪಾಧ್ಯಕ್ಷ ಮತ್ತು ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ರಾಜೀವ್ ಶುಕ್ಲಾ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ನಿರ್ದೇಶಕರ ಮಂಡಳಿಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಾಜಿ ಖಜಾಂಚಿ ಮತ್ತು ಬಿಜೆಪಿಯ ಪ್ರಭಾವಿ ನಾಯಕ ಆಶಿಶ್ ಶೆಲಾರ್ ಸಹ ಸಂಸ್ಥೆಯಲ್ಲಿ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ ಎಂದು ಕಾರ್ಯದರ್ಶಿ ದೇವಜಿತ್ ಸೈಕಿಯಾ ಶುಕ್ರವಾರ ಘೋಷಿಸಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ, ಎಸಿಸಿ ಮಂಡಳಿಯಲ್ಲಿ ಅವರ ಸ್ಥಾನ ಖಾಲಿಯಾಗಿತ್ತು. ಇತ್ತೀಚಿನವರೆಗೂ ಅವರು ಎಸಿಸಿ ಅಧ್ಯಕ್ಷರಾಗಿದ್ದರು.
‘ಬಿಸಿಸಿಐ ಪದಾಧಿಕಾರಿಗಳು ಮತ್ತು ಅಪೆಕ್ಸ್ ಕೌನ್ಸಿಲ್ ಪರವಾಗಿ, ಏಷ್ಯಾದಲ್ಲಿ ಕ್ರಿಕೆಟ್ ಅನ್ನು ಉತ್ತೇಜಿಸಲು, ಅಭಿವೃದ್ಧಿಪಡಿಸಲು ಮತ್ತು ಬಲಪಡಿಸಲು ಎಸಿಸಿ ಕೆಲಸ ಮಾಡುತ್ತಿರುವುದರಿಂದ ಅವರಿಬ್ಬರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ನಾವು ಬಯಸುತ್ತೇವೆ’ಎಂದು ಸೈಕಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಎಸಿಸಿ ರೊಟೇಶನ್‌ನಲ್ಲಿ ಪಾಕಿಸ್ತಾನದ ಮೊಹ್ಸಿನ್ ನಖ್ವ ಸಂಸ್ಥೆಯ ಅಧ್ಯಕ್ಷರಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.