ಲಖನೌ: ಐಪಿಎಲ್ 19ನೇ ಆವೃತ್ತಿಗೆ ಲಖನೌ ಸೂಪರ್ ಜೈಂಟ್ಸ್(ಎಲ್‌ಎಸ್‌ಜಿ) ತಂಡದ ಬೌಲಿಂಗ್ ಕೋಚ್ ಆಗಿ ಭಾರತದ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್ ಅವರನ್ನು ನೇಮಕ ಮಾಡಲಾಗಿದೆ.
ಎಲ್‌ಎಸ್‌ಜಿ ತಂಡದಿಂದ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಆದರೆ, ಭರತ್ ಅರುಣ್ ಅವರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ತಂಡದ ಮೂಲಗಳು ಪಿಟಿಐಗೆ ತಿಳಿಸಿವೆ.
ಭರತ್ ಅರುಣ್ ಅವರು ಐಪಿಎಲ್‌ನ ನಾಲ್ಕು ಆವೃತ್ತಿಗಳಲ್ಲಿ ಕೆಕೆಆರ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.
ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡವು 8ನೇ ಸ್ಥಾನ ಪಡೆದಿತ್ತು. ತಂಡದ ಬ್ಯಾಟಿಂಗ್ ಕೋಚ್ ಆಗಿದ್ದ ಚಂದ್ರಕಾಂತ್ ಪಂಡಿತ್ ಅವರನ್ನು ಕೂಡ ಕೆಕೆಆರ್ ತಂಡವು ಮುಂದಿನ ಆವೃತ್ತಿಗೆ ಕೈಬಿಟ್ಟಿದೆ.
ಐಪಿಎಲ್ 18ನೇ ಆವೃತ್ತಿಯಲ್ಲಿ ಏಳನೇ ಸ್ಥಾನ ಪಡೆದಿದ್ದ, ಎಲ್‌ಎಸ್‌ಜಿ ತಂಡವು ಕೂಡ ತನ್ನ ಸಹಾಯಕ ಸಿಬ್ಬಂದಿಯನ್ನು ಬದಲಾವಣೆ ಮಾಡುತ್ತಿದೆ. ಅದರಲ್ಲೂ ಕಳೆದ ಆವೃತ್ತಿಯಲ್ಲಿ ತಂಡದ ಬೌಲಿಂಗ್ ವಿಭಾಗವು ನೀರಸ ಪ್ರದರ್ಶನ ತೋರಿಸಿತ್ತು. ಹಾಗಾಗಿ ಭಾರತ ತಂಡದ ಬೌಲಿಂಗ್ ಕೋಚ್ ಆಗಿ ಅನುಭವವಿರುವ ಭರತ್ ಅರುಣ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.