
ಪರ್ತ್: ಬಿಗ್ ಬ್ಯಾಷ್ ಲೀಗ್‌ನ 15ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ವಿರುದ್ಧ ಪರ್ತ್ ಸ್ಕಾರ್ಚರ್ಸ್ ತಂಡವು 6 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ 6ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಡ್ನಿ ಸಿಕ್ಸರ್ಸ್ ತಂಡವು 20 ಓವರ್‌ಗಳ ಅಂತ್ಯಕ್ಕೆ 10 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತ್ತು.
ಸಿಡ್ನಿ ಸಿಕ್ಸರ್ಸ್ ಪರ ಅನುಭವಿ ಆಟಗಾರ ಸ್ಟಿವ್ ಸ್ಮಿತ್ (24 ರನ್), ಜೋಶ್ ಫಿಲಿಪ್ (24 ರನ್) ನಾಯಕ ಮೊಯಿಸಸ್ ಹೆನ್ರಿಕ್ಸ್ (24 ರನ್) ಗಳಿಸಿದರು.
133 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಪರ್ತ್ ಸ್ಕಾರ್ಚರ್ಸ್ ತಂಡವು 17.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟಿತು. ಇನ್ನೂ 15 ಎಸೆತಗಳು ಬಾಕಿ ಇರುವಂತೆಯೇ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಪರ್ತ್ ಸ್ಕಾರ್ಚರ್ಸ್ ಪರ ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ (44 ರನ್) ಹಾಗೂ ಫಿನ್ ಅಲೆನ್ (36 ರನ್) ಮೊದಲ ವಿಕೆಟ್‌ಗೆ 80 ರನ್‌ಗಳ ಜೊತೆಯಾಟವಾಡುವ ಮೂಲಕ, ತಂಡವನ್ನು ಗೆಲುವಿನಂಚಿಗೆ ತಂದರು.
17ನೇ ಓವರ್‌ನ ಮೂರನೇ ಎಸೆತವನ್ನು ಜೋಶ್ ಇಂಗ್ಲಿಸ್ ಸಿಕ್ಸರ್‌ಗಟ್ಟುವ ಮೂಲಕ 6 ವಿಕೆಟ್‌ಗಳ ಗೆಲುವು ಸಾಧಿಸಿದ ಪರ್ತ್ ಸ್ಕಾರ್ಚರ್ಸ್ ತಂಡವು, 6ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.