ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಬ್ ಇಡಲಾಗಿದೆ ಎಂದು ಶುಕ್ರವಾರ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಮತ್ತು ದೆಹಲಿ ಪೊಲೀಸ್ ತಂಡಗಳು ತಪಾಸಣೆ ನಡೆಸಿದವು. ಇದು ಹುಸಿ ಬೆದರಿಕೆ ಕರೆ ಎಂದು ನಂತರ ತಿಳಿದುಬಂತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡೆಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಗೆ (ಡಿಡಿಸಿಎ) ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ತಕ್ಷಣ ದೆಹಲಿ ಪೊಲೀಸರ ಗಮನಕ್ಕೆ ತರಲಾಯಿತು. ಇಡೀ ಕ್ರೀಡಾಂಗಣ ಜಾಲಾಡಿದ ನಂತರ ಇದು ಹುಸಿ ಕರೆಯೆಂಬುದು ಗೊತ್ತಾಯಿತು ಎಂದು ಡಿಸಿಸಿಎ ಕಾರ್ಯದರ್ಶಿ ಅಶೋಕ್ ಶರ್ಮಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಅನುಮಾನಾಸ್ಪದ ಎನಿಸುವಂಥ ಯಾವುದೇ ವಸ್ತು ಪತ್ತೆಯಾಗಿಲ್ಲ. ಆದರೂ ಕ್ರೀಡಾಂಗಣದ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.