ADVERTISEMENT

ಅಡಿಲೇಡ್ ಟೆಸ್ಟ್: ರೋಚಕ ಪಂದ್ಯದಲ್ಲಿ ಭಾರತಕ್ಕೆ 31 ರನ್‌ಗಳ ಜಯ

ಇತಿಹಾಸ ನಿರ್ಮಿಸಿದ ಭಾರತ

ಏಜೆನ್ಸೀಸ್
Published 10 ಡಿಸೆಂಬರ್ 2018, 6:12 IST
Last Updated 10 ಡಿಸೆಂಬರ್ 2018, 6:12 IST
   

ಅಡಿಲೇಡ್:ಇಲ್ಲಿ ನಡೆದಬಾರ್ಡರ್–ಗಾವಸ್ಕರ್ ಟ್ರೋಫಿ ಟೆಸ್ಟ್‌ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 31 ರನ್‌ಗಳಿಂದ ಐತಿಹಾಸಿಕ ಜಯ ಸಾಧಿಸಿದೆ. ಇದರೊಂದಿಗೆ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡ 1–0 ಅಂತರ ಕಾಯ್ದುಕೊಂಡಂತಾಗಿದೆ.

ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಜಯ ಗಳಿಸಿರುವುದು ಇದೇ ಮೊದಲಾಗಿದೆ.

ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರ ಅರ್ಧಶತಕಗಳ ಬಲದಿಂದ ಭಾರತ ತಂಡ ನೀಡಿದ್ದ323 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವು ಕೊನೆಯ ದಿನವಾದ ಸೋಮವಾರ 291 ರನ್‌ಗಳಿಗೆ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

ADVERTISEMENT

ನಾಲ್ಕನೇ ದಿನವಾದ ಭಾನುವಾರ 49 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 104 ರನ್‌ ಗಳಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ಸೋಮವಾರ ಬೆಳಿಗ್ಗೆ ಜಸ್‌ಪ್ರೀತ್‌ ಬೂಮ್ರಾ ಆಘಾತ ನೀಡಿದರು. ಅರ್ಧಶತಕ (60) ಗಳಿಸಿ ಆಡುತ್ತಿದ್ದ ಶಾನ್ ಮಾರ್ಷ್ ಅವರನ್ನು ಔಟ್ ಮಾಡುವ ಮೂಲಕ ಭಾರತದ ಗೆಲುವಿನ ಹಾದಿ ಸುಗಮಗೊಳಿಸಿದರು. ನಂತರ ಕ್ರೀಸಿಗಿಳಿದ ಹ್ಯಾಂಡ್ಸ್ ಕಾಂಬ್ ಮತ್ತು ಟ್ರಾವಿಸ್ ಹೆಡ್ ತಲಾ 14 ರನ್ ಗಳಿಸಿ ಔಟ್ ಆದರು.ನಾಯಕ ಟಿಮ್ ಪೈನೆ 41 ರನ್ ಗಳಿಸಿ ಭಾರತದ ಗೆಲುವಿಗೆ ಅಡ್ಡಿಪಡಿಸುವ ಸೂಚನೆ ನೀಡಿದರು. ಆದರೆ ಮತ್ತೆ ದಾಳಿಗಿಳಿದ ಬೂಮ್ರಾ ಪೈನೆ ಅವರಿಗೂ ಪೆವಿಲಿಯನ್ ದಾರಿ ತೋರುವ ಮೂಲಕ ಭಾರತದ ಗೆಲುವನ್ನು ಬಹುತೇಕ ಖಚಿತಪಡಿಸಿದರು.

ಭಾರತ ತಂಡವು ನೀಡಿದ್ದ 323 ರನ್‌ಗಳ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ತಂಡವುನಾಲ್ಕನೇ ದಿನದಾಟದ ವೇಳೆ ಆರಂಭದಲ್ಲಿಯೇ ಎಡವಿತ್ತು.ಮಧ್ಯಮವೇಗಿ ಮೊಹಮ್ಮದ್ ಶಮಿ (15ಕ್ಕೆ2) ಮತ್ತು ಆಫ್‌ಸ್ಪಿನ್ನರ್ ಆರ್. ಅಶ್ವಿನ್ ನೀಡಿರುವ ಪೆಟ್ಟಿಗೆ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ತಂಡಕ್ಕೆ ಆಸರೆಯಾಗಿ ನಿಂತಿದ್ದುಆನುಭವಿ ಬ್ಯಾಟ್ಸ್‌ಮನ್ ಶಾನ್ ಮಾರ್ಷ್ಮತ್ತು ಟ್ರಾವಿಸ್ ಹೆಡ್. ಆದರೆ ಇವರ ಜತೆಯಾಟಕ್ಕೆಐದನೇ ದಿನದಾಟದ ಆರಂಭದಲ್ಲೇ ಬೂಮ್ರಾ ತಡೆಯೊಡ್ಡಿದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಜಸ್‌ಪ್ರೀತ್‌ ಬೂಮ್ರಾ, ಆರ್. ಅಶ್ವಿನ್, ಮೊಹಮ್ಮದ್ ಶಮಿ ತಲಾ 3 ವಿಕೆಟ್ ಕಬಳಿಸಿದರೆ ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.

ಮೊದಲ ಇನಿಂಗ್ಸ್‌ನಲ್ಲಿಚೇತೇಶ್ವರ್ ಪೂಜಾರ ಶತಕದ ನೆರವಿನಿಂದಭಾರತ ತಂಡವು 250 ರನ್‌ ಗಳಿಸಿತ್ತು. ಆಸ್ಟ್ರೇಲಿಯಾ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ನಷ್ಟಕ್ಕೆ 235 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು10 ವಿಕೆಟ್ ನಷ್ಟಕ್ಕೆ 307 ರನ್‌ ಗಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.