ಮುಂಬೈ: ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರನ್ನು ಶ್ರೀಲಂಕಾ ಎದುರಿನ ಸರಣಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಅವರು ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಅವರಿಗೆ ತಂಡ ಸೇರುವ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೋದ ವರ್ಷದ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಸಂದರ್ಭದಲ್ಲಿ ಅವರು ಬೆನ್ನುಹುರಿಯ ಗಾಯದಿಂದ ಹೊರಗುಳಿದಿದ್ದರು. ಅಲ್ಲಿಂದ ಅವರು ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದರು.
‘ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯು ಬೂಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಎನ್‌ಸಿಎನಲ್ಲಿ ಫಿಟ್‌ನೆಸ್ ಟೆಸ್ಟ್ ನೀಡಿರುವ ಬೂಮ್ರಾ ಅರ್ಹತೆ ಗಳಿಸಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲಂಕಾ ಎದುರಿನ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ಗುವಾಹಟಿ (ಜ.10), ಕೋಲ್ಕತ್ತ (ಜ.12) ಮತ್ತು ತಿರುವನಂತಪುರಂ (ಜ.15) ಆತಿಥ್ಯ ವಹಿಸಲಿವೆ.
ಇದೇ ವರ್ಷ ಭಾರತದಲ್ಲಿಯೇ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ನಡೆಯಲಿದೆ. ಅದರಿಂದಾಗಿ ಈ ಸರಣಿಯು ಮಹತ್ವ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.