ADVERTISEMENT

ವಿಸ್ಡನ್‌ ವರ್ಷದ ಕ್ರಿಕೆಟಿಗರ ಪಟ್ಟಿಯಲ್ಲಿ ಬೂಮ್ರಾ, ರೋಹಿತ್

ಪಿಟಿಐ
Published 21 ಏಪ್ರಿಲ್ 2022, 8:29 IST
Last Updated 21 ಏಪ್ರಿಲ್ 2022, 8:29 IST
ಜಸ್‌ಪ್ರೀತ್ ಬೂಮ್ರಾ, ರೋಹಿತ್ ಶರ್ಮಾ: ಪಿಟಿಐ ಚಿತ್ರ
ಜಸ್‌ಪ್ರೀತ್ ಬೂಮ್ರಾ, ರೋಹಿತ್ ಶರ್ಮಾ: ಪಿಟಿಐ ಚಿತ್ರ   

ಲಂಡನ್: 2022ರ ಸಾಲಿನ ವಿಸ್ಡನ್ ವರ್ಷದ ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಅವರನ್ನು ಹೆಸರಿಸಲಾಗಿದೆ.

ಇವರಿಬ್ಬರ ಜೊತೆಗೆ ನ್ಯೂಜಿಲೆಂಡ್ ಬ್ಯಾಟರ್ ಡೆವೊನ್ ಕಾನ್ವೆ, ಇಂಗ್ಲೆಂಡ್ ವೇಗಿ ಒಲಿ ರಾಬಿನ್ಸನ್ ಮತ್ತು ಮಹಿಳಾ ಕ್ರಿಕೆಟ್ ತಾರೆ ಡೇನ್ ವ್ಯಾನ್ ನೀಕರ್ಕ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ಇಂಗ್ಲೆಂಡ್‌ನ ಜೋ ರೂಟ್ ವಿಶ್ವದ ಲೀಡಿಂಗ್ ಕ್ರಿಕೆಟರ್ ಎಂದು ಹೆಸರಿಸಲ್ಪಟ್ಟರೆ, ದಕ್ಷಿಣ ಆಫ್ರಿಕಾದ ಮಹಿಳಾ ತಂಡದ ಬ್ಯಾಟರ್ ಲಿಜೆಲ್ಲೆ ಲೀ ಅವರು ವಿಶ್ವದ ಮಹಿಳಾ ಲೀಡಿಂಗ್ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ADVERTISEMENT

ಅಲ್ಲದೆ, ಪಾಕಿಸ್ತಾನದ ವಿಕೆಟ್‌ ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ವಿಶ್ವದ ಟಿ20 ಲೀಡಿಂಗ್ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಕಳೆದ ಇಂಗ್ಲೆಂಡ್‌ ಪ್ರವಾಸದಲ್ಲಿ ಬೂಮ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಲಾರ್ಡ್ಸ್‌ನಲ್ಲಿ ಭಾರತದ ಐತಿಹಾಸಿಕ ಗೆಲುವು ಮತ್ತು ಓವಲ್‌ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.