ADVERTISEMENT

ಭಾರತದ ವಿರುದ್ಧ ಟಿ20 ಸರಣಿಗೆ ಜಾನಿ ಬೆಸ್ಟೊ

ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 14:57 IST
Last Updated 11 ಫೆಬ್ರುವರಿ 2021, 14:57 IST
ಜಾನಿ ಬೆಸ್ಟೊ
ಜಾನಿ ಬೆಸ್ಟೊ   

ಲಂಡನ್ (ಪಿಟಿಐ): ಅನುಭವಿ ಬ್ಯಾಟ್ಸ್‌ಮನ್ ಜಾನಿ ಬೆಸ್ಟೊ ಮತ್ತು ವಿಕೆಟ್‌ಕೀಪರ್ ಜೋಸ್ ಬಟ್ಲರ್ ಅವರು ಭಾರತದ ವಿರುದ್ಧ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಯಲ್ಲಿ ಆಡುವ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್‌ ಕ್ರಿಕೆಟ್ ಸಂಸ್ಥೆಯು ಗುರುವಾರ 16 ಆಟಗಾರರ ತಂಡವನ್ನು ಪ್ರಕಟಿಸಿದೆ. ಅಹಮದಾಬಾದಿನಲ್ಲಿ ಮಾರ್ಚ್‌ 12 ರಿಂದ 20ರವರೆಗೆ ಐದು ಟಿ20 ಪಂದ್ಯಗಳ ಸರಣಿ ಆಯೋಜನೆಗೊಂಡಿದೆ.

ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆಡಿದ್ದ ಬಟ್ಲರ್ ಅವರು ಕೌಟುಂಬಿಕ ಕಾರಣಗಳಿಗಾಗಿ ಸ್ವದೇಶಕ್ಕೆ ಮರಳಿದ್ದರು. ಜಾನಿ ಬೆಸ್ಟೊ ಅವರನ್ನು ಮೊದಲ ಎರಡು ಟೆಸ್ಟ್‌ಗಳಿಗೆ ವಿಶ್ರಾಂತಿ ನೀಡಲಾಗಿದೆ.

ADVERTISEMENT

ಸೀಮಿತ ಓವರ್‌ಗಳ ಸರಣಿಯಲ್ಲಿ ತಂಡದ ನಾಯಕತ್ವವನ್ನು ಏಯಾನ್ ಮಾರ್ಗನ್ ವಹಿಸುವರು.

ತಂಡ ಇಂತಿದೆ: ಏಯಾನ್ ಮಾರ್ಗನ್ (ನಾಯಕ), ಮೋಯಿನ್ ಅಲಿ, ಜೋಫ್ರಾ ಆರ್ಚರ್, ಜೋನಾಥನ್ ಬೆಸ್ಟೊ, ಸ್ಯಾಮ್ ಬಿಲ್ಲಿಂಗ್ಸ್‌, ಜೊಸ್ ಬಟ್ಲರ್, ಸ್ಯಾಮ್ ಕರನ್, ಟಾಮ್ ಕರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೆವಿಡ್ ಮಲಾನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್‌, ರೀಸ್ ಟಾಪ್ಲೆ, ಮಾರ್ಕ್ ವುಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.