ADVERTISEMENT

ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕರ್ನಾಟಕ ಬುಲ್ಡೋಜರ್ಸ್ ತಂಡ ಪ್ರಕಟ

​ಪ್ರಜಾವಾಣಿ ವಾರ್ತೆ
Published 29 ಜನವರಿ 2025, 16:28 IST
Last Updated 29 ಜನವರಿ 2025, 16:28 IST
ಉದ್ಯಮಿ ಅಶೋಕ್ ಖೇಣಿ ಮತ್ತು ಚಿತ್ರನಟ ಸುದೀಪ್ ಅವರು ಬೆಂಗಳೂರಿನಲ್ಲಿ ಬುಧವಾರ ತಂಡದ ಜರ್ಸಿ ಬಿಡುಗಡೆ ಮಾಡಿದರು.
ಉದ್ಯಮಿ ಅಶೋಕ್ ಖೇಣಿ ಮತ್ತು ಚಿತ್ರನಟ ಸುದೀಪ್ ಅವರು ಬೆಂಗಳೂರಿನಲ್ಲಿ ಬುಧವಾರ ತಂಡದ ಜರ್ಸಿ ಬಿಡುಗಡೆ ಮಾಡಿದರು.   

ಬೆಂಗಳೂರು: ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್‌) 11ನೇ ವರ್ಷದ ಟೂರ್ನಿಗೆ ಸಿದ್ಧತೆ ಆರಂಭವಾಗಿದ್ದು, ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಪ್ರಕಟಿಸಲಾಗಿದೆ. ಫೆಬ್ರುವರಿ 8ರಂದು ಆರಂಭವಾಗುವ ಈ ಬಾರಿಯ ಲೀಗ್‌ನಲ್ಲಿ ಏಳು ತಂಡಗಳು ಕಣದಲ್ಲಿವೆ.

ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಈ ಬಾರಿಯೂ ಸುದೀಪ್ ಮುನ್ನಡೆಸಲಿದ್ದು, ಉದ್ಯಮಿ ಅಶೋಕ್‌ ಖೇಣಿ ತಂಡದ ಮಾಲೀಕರಾಗಿದ್ದಾರೆ. ಕಳೆದ ಬಾರಿ ಟೂರ್ನಿ ತಪ್ಪಿಸಿಕೊಂಡಿದ್ದ ಗಣೇಶ್ ಈ ಬಾರಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಲೀಗ್‌ನಲ್ಲಿ ಭಾಗವಹಿಸಲಿರುವ ಇತರ ತಂಡಗಳು ಎಂದರೆ–  ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್‌ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್.

ADVERTISEMENT

ಬೆಂಗಳೂರಿನಲ್ಲಿ ಫೆ. 8ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣಸಾಡಲಿವೆ.

ಕರ್ನಾಟಕ ಬುಲ್ಡೋಜರ್ಸ್ ತಂಡ: ಸುದೀಪ್, ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನಿಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ಕರಣ್ ಆರ್ಯನ್, ಮಂಜುನಾಥ್ ಗೌಡ, ಸಾಗರ್ ಗೌಡ, ಅಲಕಾನಂದ, ತ್ರಿವಿಕ್ರಮ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.