ವರುಣ್ ಚಕ್ರವರ್ತಿ
ದುಬೈ: ಭಾರತದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬುಧವಾರ ಬಿಡುಗಡೆ ಮಾಡಿದ ಟಿ20 ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಹಿಂಬಡ್ತಿ ಪಡೆದಿದ್ದಾರೆ.
ಕಳೆದ ವಾರ ಎರಡನೇ ಸ್ಥಾನದಲ್ಲಿದ್ದ ವರುಣ್ ಈ ಬಾರಿ 706 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ನ್ಯೂಜಿಲೆಂಡ್‌ನ ನಾಯಕ ಜಾಕೋಬ್ ಡಫಿ (723) ಮತ್ತು ವೆಸ್ಟ್ ಇಂಡೀಸ್‌ನ ಅಕೀಲ್ ಹುಸೇನ್ (707) ಅವರ ನಂತರದ ಸ್ಥಾನದಲ್ಲಿದ್ದಾರೆ.
ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ (674) ಮತ್ತು ಎಡಗೈ ವೇಗಿ ಅರ್ಷದೀಪ್ ಸಿಂಗ್ (653) ಕ್ರಮವಾಗಿ ಏಳನೇ ಮತ್ತು ಹತ್ತನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ. ಅಕ್ಷರ್ ಪಟೇಲ್ 13ನೇ ಸ್ಥಾನದಲ್ಲಿದ್ದಾರೆ.
ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ಅಗ್ರಸ್ಥಾನದಲ್ಲಿದ್ದರೆ ಮತ್ತು ಇಂಗ್ಲೆಂಡ್‌ನ ಫಿಲ್ ಸಾಲ್ಟ್ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ತಂಡದ ತಿಲಕ್ ವರ್ಮಾ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಕ್ರಮವಾಗಿ ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿದ್ದಾರೆ.
ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ಹಾರ್ದಿಕ್ ಪಾಂಡ್ಯ ಅವರ ಅಗ್ರಸ್ಥಾನ ಅಬಾಧಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.