ವಿರಾಟ್ ಕೊಹ್ಲಿ
(ಪಿಟಿಐ ಚಿತ್ರ)
ದುಬೈ: ಭಾರತ ಕ್ರಿಕೆಟ್ ತಂಡದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ, ಮಗದೊಂದು ದಾಖಲೆಯನ್ನು ಬರೆದಿದ್ದಾರೆ.
ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಫೀಲ್ಡರ್‌ಗಳ ಪೈಕಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿದಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು (ಮಂಗಳವಾರ) ನಡೆಯುತ್ತಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್, ಈ ಸಾಧನೆ ಮಾಡಿದ್ದಾರೆ.
ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್‌ಗಳ ಪೈಕಿ ಮಹೇಲಾ ಜಯವರ್ಧನೆ ಬಳಿಕ ಎರಡನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.
ಅಗ್ರಸ್ಥಾನದಲ್ಲಿರುವ ಶ್ರೀಲಂಕಾದ ಮಹೇಲಾ ಜಯವರ್ಧನೆ ಒಟ್ಟು 218 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 301 ಪಂದ್ಯಗಳಲ್ಲಿ 161 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇನ್ನು ಮೂರನೇ ಸ್ಥಾನದಲ್ಲಿರುವ ಪಾಂಟಿಂಗ್ 160 ಕ್ಯಾಚ್‌ಗಳನ್ನು ಪಡೆದಿದ್ದಾರೆ.
ಏಕದಿನದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಫೀಲ್ಡರ್‌ಗಳ ಪಟ್ಟಿ:
ಮಹೇಲಾ ಜಯವರ್ಧನೆ: 218
ವಿರಾಟ್ ಕೊಹ್ಲಿ: 161
ರಿಕಿ ಪಾಂಟಿಂಗ್: 160
ಮೊಹಮ್ಮದ್ ಅಜರುದ್ದೀನ್: 156
ರಾಸ್ ಟೇಲರ್: 142
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.