ಶುಭಮನ್ ಗಿಲ್, ವಿರಾಟ್ ಕೊಹ್ಲಿ
(ಪಿಟಿಐ ಚಿತ್ರ)
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಬಳಿಕ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವಿದಾಯ ಘೋಷಿಸಲಿದ್ದಾರೆ ಎಂಬ ಕುರಿತು ವರದಿಗಳು ಹರಡಿದ್ದವು.
ಆದರೆ ಈ ಎಲ್ಲ ವರದಿಗಳನ್ನು ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್, ತಳ್ಳಿ ಹಾಕಿದ್ದಾರೆ.
'ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರ ಭವಿಷ್ಯದ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
'ಟೀಮ್ ಇಂಡಿಯಾ ಡ್ರೆಸ್ಸಿಂಗ್ ಕೊಠಡಿಯಲ್ಲಿ ರೋಹಿತ್ ಹಾಗೂ ವಿರಾಟ್ ನಿವೃತ್ತಿ ಚರ್ಚೆ ನಡೆದಿಲ್ಲ' ಎಂದು ಅವರು ತಿಳಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು ಭಾರತ ಎದುರಿಸಲಿದೆ. ಪಂದ್ಯಪೂರ್ವ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.