ಚೇತೇಶ್ವರ ಪೂಜಾರ
ಕೃಪೆ: ರಾಯಿಟರ್ಸ್
ನವದೆಹಲಿ: ಟೆಸ್ಟ್ ಪರಿಣತ ಬ್ಯಾಟರ್ ಚೇತೇಶ್ವರ ಪೂಜಾರ (37) ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು (ಭಾನುವಾರ) ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
'ಭಾರತದ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ಸಾಧ್ಯವಾದಷ್ಟು ಪ್ರಯತ್ನ ಮಾಡುವಾಗ ಆಗುವ ಮೂಡುವ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ' ಎಂದು ಬರೆದುಕೊಂಡಿದ್ದಾರೆ.
ಎಲ್ಲಕ್ಕೂ ಕೊನೆಯಿದೆ ಎಂದು ಅಭಿಪ್ರಾಯಪಟ್ಟಿರುವ ಅವರು, ಅಪಾರ ಕೃತಜ್ಞತೆಗಳೊಂದಿಗೆ ಭಾರತೀಯ ಕ್ರಿಕೆಟ್‌ನ ಎಲ್ಲ ಮಾದರಿಯ ನಿವೃತ್ತಿಹೊಂದಲು ನಿರ್ಧರಿಸಿದ್ದೇನೆ' ಎಂದು ತಿಳಿಸಿದ್ದಾರೆ. ಹಾಗೆಯೇ ವೃತ್ತಿಜೀವನದುದ್ದಕ್ಕೂ ತಮ್ಮನ್ನು ಬೆಂಬಲಿಸಿದ, ಪ್ರೀತಿ ತೋರಿದ ಎಲ್ಲರಿಗೂ ಧನ್ಯವಾದಗಳನ್ನೂ ತಿಳಿಸಿದ್ದಾರೆ.
ಟಿ20 ಮಾದರಿಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸುವ ಅವಕಾಶ ಗಿಟ್ಟಿಸಿದ ಪೂಜಾರಗೆ, ಏಕದಿನದಲ್ಲೂ ಸಾಕಷ್ಟು ಅವಕಾಶಗಳು ಸಿಗಲಿಲ್ಲ. ಆದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ 3ನೇ ಕ್ರಮಾಂಕದ ನಂಬಿಕಸ್ಥ ಬ್ಯಾಟರ್ ಆಗಿದ್ದರು. ಐಪಿಎಲ್‌ನಲ್ಲಿ 30 ಪಂದ್ಯಗಳಲ್ಲಿ ಆಡಿದರೂ, ಬೀಸಾಟದ ಮೂಲಕ ಗಮನ ಸೆಳೆಯಲು ವಿಫಲರಾಗಿದ್ದರು.
ಏಕದಿನ ಮಾದರಿಯಲ್ಲಿ 5 ಪಂದ್ಯಗಳಿಂದ 51 ರನ್ ಗಳಿಸಿದ್ದ ಅವರು, ಐಪಿಎಲ್‌ನಲ್ಲಿ 22 ಇನಿಂಗ್ಸ್‌ಗಳಲ್ಲಿ 390 ರನ್ ಕಲೆಹಾಕಿದ್ದರು.
2024ರಲ್ಲೇ ಟಿ20 ಮಾದರಿಗೆ ವಿದಾಯ ಹೇಳಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಇದೇ ವರ್ಷ ಮೇ ತಿಂಗಳಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.