
ಚಿನ್ನಸ್ವಾಮಿ ಕ್ರೀಡಾಂಗಣ
ಬೆಂಗಳೂರು: "ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
"ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್ ಮಾರಾಟ ಮಾಡಬೇಕು, ಜನದಟ್ಟಣೆ ಅಗತ್ಯಕ್ಕೆ ತಕ್ಕಂತೆ ದೊಡ್ಡ ಗೇಟ್ ಗಳ ಅಳವಡಿಕೆ, ಆಂಬುಲೆನ್ಸ್ ನಿಯೋಜನೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸುಗಳ ಅನುಗುಣವಾಗಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಷರತ್ತಿನೊಂದಿಗೆ ಅನುಮತಿ ನೀಡಲಾಗಿದೆ" ಎಂದು ಮಾಹಿತಿ ನೀಡಿದರು.
"ಇದು ಕ್ರಿಕೆಟ್ ಪ್ರಿಯರಿಗೆ ಇದೊಂದು ಶುಭ ಸುದ್ದಿಯಾಗಿದ್ದು, ಇಷ್ಟು ದಿನಗಳ ಕಾಲ ಅನುಭವಿಸಿದ ನೋವಿಗೆ ವಿಷಾದಿಸುತ್ತೇನೆ. ನಾವು ಒಂದು ಪ್ರತಿಷ್ಠಿತ ಪಂದ್ಯಾವಳಿ ಕಳೆದುಕೊಂಡಿದ್ದೇವೆ. ಮುಂದಿನ ಬಾರಿ ನಾವು ಜಾಗೃತರಾಗಿರೋಣ" ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.