ADVERTISEMENT

ವಿಶ್ವಕಪ್‌: ಭಾರತ ಸರ್ಕಾರದ ನಿಲುವಿಗೆ ಬದ್ಧ– ಸಿ.ಕೆ.ಖನ್ನಾ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2019, 17:36 IST
Last Updated 24 ಫೆಬ್ರುವರಿ 2019, 17:36 IST
ಸಿ.ಕೆ.ಖನ್ನಾ
ಸಿ.ಕೆ.ಖನ್ನಾ   

ಕಟಕ್‌: ‘ಈ ಬಾರಿಯ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಪಾಕಿಸ್ತಾನದ ಎದುರು ಆಡಬೇಕೊ, ಬೇಡವೊ ಎಂಬುದರ ಬಗ್ಗೆ ಭಾರತ ಸರ್ಕಾರ ಕೈಗೊಳ್ಳುವ ತೀರ್ಮಾನವೇ ಅಂತಿಮ. ಅದಕ್ಕೆ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಬದ್ಧವಾಗಿರಲಿದೆ’ ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಎದುರು ಪಂದ್ಯ ಆಡಬಾರದೆಂಬ ಕೂಗು ಎಲ್ಲೆಡೆಯಿಂದಲೂ ಕೇಳಿ ಬರುತ್ತಿದೆ.

‘ಬಿಸಿಸಿಐಗೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ನಿರ್ದೇಶನ ಬಂದಿಲ್ಲ. ಹೀಗಾಗಿ ಈ ಕುರಿತು ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಆಗಿಲ್ಲ. ಕ್ರಿಕೆಟ್‌ ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಈ ವಿಷಯವಾಗಿ ಸರ್ಕಾರದ ಜೊತೆ ಮಾತುಕತೆ ನಡೆಸಲಿದೆ’ ಎಂದು ಅವರು ನುಡಿದರು.

ADVERTISEMENT

ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್‌ 16ರಂದು ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಿಗದಿಯಾಗಿದೆ.

ಈ ಪಂದ್ಯದಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಹೆಚ್ಚು ಲಾಭ ಎಂದು ಸುನಿಲ್‌ ಗಾವಸ್ಕರ್‌ ಮತ್ತು ಸಚಿನ್‌ ತೆಂಡೂಲ್ಕರ್‌ ಅಭಿಪ್ರಾಯಪಟ್ಟಿದ್ದಾರೆ. ಹರಭಜನ್‌ ಸಿಂಗ್‌ ಸೇರಿದಂತೆ ಹಲವರು ಪಂದ್ಯ ಬಹಿಷ್ಕರಿಸುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.