ಬೆಂಗಳೂರು: ಐಪಿಎಲ್ 18ನೇ ಆವೃತ್ತಿಯಲ್ಲಿ ಕಪ್ ಗೆಲ್ಲುವ ಮೂಲಕ 18 ವರ್ಷಗಳ ಕಾಯುವಿಕೆ ಕೊನೆಗೊಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಲಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ನಿನ್ನೆಯ ಐಪಿಎಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್‌ಸಿಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದೇನೆ' ಎಂದು ಪೋಸ್ಟ್ ಮಾಡಿದ್ದಾರೆ.
ಇದಾದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಜರುಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.