ADVERTISEMENT

ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಕೊಹ್ಲಿ, ಶಾಸ್ತ್ರಿಗೆ ಕಾದಿದೆ ಸಿಒಎ ‘ಪರೀಕ್ಷೆ’

ಪಿಟಿಐ
Published 12 ಜುಲೈ 2019, 19:30 IST
Last Updated 12 ಜುಲೈ 2019, 19:30 IST
ರವಿಶಾಸ್ತ್ರಿ ಮತ್ತು ವಿರಾಟ್ ಕೊಹ್ಲಿ
ರವಿಶಾಸ್ತ್ರಿ ಮತ್ತು ವಿರಾಟ್ ಕೊಹ್ಲಿ   

ಲಂಡನ್: ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ಆಡಳಿತಾಧಿಕಾರಿ ಸಮಿತಿಯ ‘ಪರೀಕ್ಷೆ’ ಕಾದಿದೆ.

ಬುಧವಾರ ನಡೆದಿದ್ದ ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಎದುರು 18 ರನ್‌ಗಳಿಂದ ಸೋತಿತ್ತು. ಈ ಮೂಲಕ ತಂಡ ಭಾರಿ ಟೀಕೆಗೆ ಗುರಿಯಾಗಿತ್ತು. ಕೊಹ್ಲಿ ಮತ್ತು ರವಿಶಾಸ್ತ್ರಿ ಭಾರತಕ್ಕೆ ಮರಳಿದ ಕೂಡಲೇ ಸಿಒಎ ಸದಸ್ಯರು ಮಾಹಿತಿ ಪಡೆಯಲಿದ್ದಾರೆ.

ಮುಖ್ಯಸ್ಥರಾದ ವಿನೋದ್ ರಾಯ್, ಡಯಾನ ಎಡುಲ್ಜಿ ಮತ್ತು ರವಿ ತೋಡಗೆ ಅವರು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್‌.ಕೆ ಪ್ರಸಾದ್ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟ್ವೆಂಟಿ–20 ವಿಶ್ವಕಪ್‌ ಟೂರ್ನಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ.

ADVERTISEMENT

‘ನಾಯಕ ಮತ್ತು ಕೋಚ್‌ ವಾಪಸಾದ ನಂತರ ಮಾತುಕತೆ ನಡೆಸಲಿದ್ದೇವೆ. ಇದಕ್ಕೆ ದಿನಾಂಕವಾಗಲಿ ಸಮಯವಾಗಲಿ ನಿಗದಿ ಮಾಡಲಿಲ್ಲ’ ಎಂದು ಸಿಂಗಪುರದಲ್ಲಿರುವ ವಿನೋದ್‌ ರಾಯ್ ಸುದ್ದಿಸಂಸ್ಥೆಗೆ ತಿಳಿಸಿದರು. ಭಾರತ ತಂಡದ ಆಟಗಾರರು ಭಾನುವಾರ ಮುಂಬೈಯಲ್ಲಿ ಬಂದಿಳಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.