ADVERTISEMENT

ವಿಚಾರಣೆಗೆ ಹಾಜರಾಗಲು ದ್ರಾವಿಡ್‌ಗೆ ಸೂಚನೆ

ಪಿಟಿಐ
Published 26 ಆಗಸ್ಟ್ 2019, 20:15 IST
Last Updated 26 ಆಗಸ್ಟ್ 2019, 20:15 IST
ರಾಹುಲ್‌ ದ್ರಾವಿಡ್‌
ರಾಹುಲ್‌ ದ್ರಾವಿಡ್‌   

ನವದೆಹಲಿ: ಹಿತಾಸಕ್ತಿ ಸಂಘರ್ಷ ಆರೋಪ ಎದುರಿಸುತ್ತಿರುವ ಹಿರಿಯ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರಿಗೆ ಸೆಪ್ಟೆಂಬರ್‌ 26ರಂದು ಮುಂಬೈಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಸಿಸಿಐ ನೀತಿ ನಿಗಾ ಅಧಿಕಾರಿ (ಎತಿಕ್ಸ್‌ ಆಫಿಸರ್‌) ಡಿ.ಕೆ.ಜೈನ್‌ ಸೂಚಿಸಿದ್ದಾರೆ.

ದ್ರಾವಿಡ್‌ ಅವರನ್ನು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರನ್ನಾಗಿ ಬಿಸಿಸಿಐ ನೇಮಿಸಿತ್ತು. ಇಂಡಿಯಾ ಸಿಮೆಂಟ್ಸ್‌ ಉದ್ಯೋಗಿಯಾಗಿರುವ ದ್ರಾವಿಡ್‌, ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘಿಸಿರುವುದಾಗಿ ಮಧ್ಯಪ್ರದೇಶ ಕ್ರಿಕೆಟ್‌ ಸಂಸ್ಥೆಯ ಸದಸ್ಯ ಸಂಜೀವ್ ಗುಪ್ತಾ ಅವರು ಜೈನ್‌ಗೆ ದೂರು ನೀಡಿದ್ದರು.

ಈ ಸಂಬಂಧ ಈ ತಿಂಗಳ ಆರಂಭದಲ್ಲಿ ದ್ರಾವಿಡ್‌ಗೆ ನೋಟಿಸ್‌ ಕೂಡ ನೀಡಲಾಗಿತ್ತು. ಇದಕ್ಕೆ ಅವರು ಉತ್ತರವನ್ನೂ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.