ಸಿಡ್ನಿ: ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿಆಸ್ಟ್ರೇಲಿಯಾ ಭಾರತಕ್ಕೆ 289 ರನ್ಗಳ ಗೆಲುವಿನ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 288ರನ್ ಗಳಿಸಿದೆ. ಭಾರತದ ಬಿಗಿ ಬೌಲಿಂಗ್ ದಾಳಿಗೆ ತಕ್ಕ ಉತ್ತರ ನೀಡಿದ ಆಸ್ಟ್ರೇಲಿಯಾ ಗೌರವಾನ್ವಿತ ಮೊತ್ತವನ್ನು ಕಲೆ ಹಾಕಿದೆ. ಭಾರತ ಈ ಪಂದ್ಯವನ್ನು ಗೆಲ್ಲಲು 50 ಓವರ್ಗಳಲ್ಲಿ 289ರನ್ ಗಳಿಸಬೇಕಿದೆ.
ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಖವಾಜಾ (59), ಶಾನ್ ಮಾರ್ಷ್ (54) ಹಾಗೂ ಪೀಟರ್ ಹ್ಯಾಂಡ್ಸ್ಕಾಬ್ (73) ಆಕರ್ಷಕ ಅರ್ಧ ಶತಕ ದಾಖಲಿಸಿದರು.
ಭುವನೇಶ್ವರ್ ಕುಮಾರ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸುವ ಮೂಲಕ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಎರಡು ವಿಕೆಟ್ ಪಡೆಯುವ ಮೂಲಕಭುವನೇಶ್ವರ್ ಕುಮಾರ್ ಏಕದಿನ ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದರು.
ಸ್ಕೋರ್: ಆಸ್ಟ್ರೇಲಿಯಾ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 288 ರನ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.