ADVERTISEMENT

ಕೊರೊನಾ ವಿರುದ್ಧ ಸಮರ: ಬಿಸಿಸಿಐನಿಂದ ₹ 51 ಕೋಟಿ ದೇಣಿಗೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 20:00 IST
Last Updated 28 ಮಾರ್ಚ್ 2020, 20:00 IST
ಸೌರವ್ ಗಂಗೂಲಿ
ಸೌರವ್ ಗಂಗೂಲಿ   

ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ₹ 51 ಕೋಟಿಯನ್ನು ಪ್ರಧಾನಮಂತ್ರಿ ವಿಪತ್ತು ನಿರ್ವಹಣೆ ಮತ್ತು ಪರಿಹಾರ ನಿಧಿಗೆ ದೇಣಿಗೆ ನೀಡಿದೆ.

‘ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಪದಾಧಿಕಾರಿಗಳು, ರಾಜ್ಯ ಸಂಸ್ಥೆಗಳ ಒಮ್ಮತದ ನಿರ್ಣಯದೊಂದಿಗೆ ಪರಿಹಾರ ನಿಧಿಗೆ ದೇಣಿಗೆ ನಿರ್ಧಾರ ಮಾಡಲಾಗಿದೆ. ಕೊರೊನಾ ವೈರಸ್ ಪಿಡುಗು ತಡೆಯಲು ಮತ್ತು ತೊಂದರೆಗೊಳಗಾಗಿರುವ ಜನರಿಗೆ ನೆರವು ನೀಡಲು ಸರ್ಕಾರವು ಪ್ರಯತ್ನಿಸುತ್ತಿದೆ. ಅದಕ್ಕಾಗಿ ನಾವೂ ಕೈಜೋಡಿಸಿದ್ದೇವೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT