ADVERTISEMENT

ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ, 41 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 5:59 IST
Last Updated 24 ಸೆಪ್ಟೆಂಬರ್ 2019, 5:59 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಭಾನುವಾರ ನಡೆದ ಟಿ20 ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ನಲ್ಲಿ ಭಾಗಿಯಾದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಂದೀಪ್ ಮತ್ತ ರಾಣಾ ಬಂಧಿತರು. ಬೆಟ್ಟಿಂಗ್ ಮೂಲಕ ಸಂಗ್ರಹಿಸಿದ್ದ 41 ಲಕ್ಷ ರೂಪಾಯಿಯನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು, ಇತರ ಬುಕ್ಕಿಗಳು ಭಾಗಿಯಾದ ಬಗ್ಗೆ ಬಾಯಿಬಿಟ್ಟಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.