ADVERTISEMENT

ಭಾರತದಲ್ಲಿ ಸಾಧ್ಯವಾಗದಿದ್ದರೆ ಟಿ20 ವಿಶ್ವಕಪ್ ಯುಎಇಗೆ ಸ್ಥಳಾಂತರ?

ರಾಯಿಟರ್ಸ್
Published 30 ಏಪ್ರಿಲ್ 2021, 12:31 IST
Last Updated 30 ಏಪ್ರಿಲ್ 2021, 12:31 IST
   

ನವದೆಹಲಿ: ಹಾಗೊಂದು ವೇಳೆ ಕೋವಿಡ್-19 ಬಿಕ್ಕಟ್ಟು ದೇಶದಲ್ಲಿ ಶಮನಗೊಳ್ಳದಿದ್ದರೆ ಈ ವರ್ಷದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಸ್ಥಳಾಂತರಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ದೇಶದಲ್ಲಿ ಏಕಾಏಕಿ ಕೋವಿಡ್-19 ಎರಡನೇ ಅಲೆ ಅತಿ ತೀವ್ರವಾಗಿ ವ್ಯಾಪಿಸಿದೆ. ಇದರಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ.

ಇತ್ತೀಚೆಗಷ್ಟೇ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸುವ ತಮ್ಮ ನಿರ್ಧಾರದಲ್ಲಿ ಅಚಲರಾಗಿದ್ದೇವೆ ಎಂದು ಐಸಿಸಿ ಹೇಳಿಕೊಂಡಿತ್ತು. ಆದರೂ ಪರ್ಯಾಯ ಯೋಜನೆಯನ್ನು ಹೊಂದಿದ್ದೇವೆ ಎಂದು ತಿಳಿಸಿತ್ತು.

ADVERTISEMENT

ಭಾರತದಲ್ಲಿ ಟಿ20 ವಿಶ್ವಕಪ್ ಆಯೋಜನೆ ಸಾಧ್ಯವಾಗದಿದ್ದರೆ ಯುಎಇನಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಜನರಲ್ ಮ್ಯಾನೇಜರ್ ಧೀರಜ್ ಮಲ್ಹೋತ್ರಾ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದ ಮಧ್ಯೆಯೂ ಬಯೋಬಬಲ್ ವ್ಯವಸ್ಥೆಯಡಿಯಲ್ಲಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ ಅನ್ನು ಆಯೋಜಿಸಲಾಗುತ್ತಿದೆ. ಸದ್ಯಕ್ಕೆ ಮಂಡಳಿಯು ಕಾದು ನೋಡುವ ತಂತ್ರವನ್ನು ಅನುಸರಿಸುತ್ತಿದೆ.

ಕಳೆದ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಯುಎಇನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.