ADVERTISEMENT

ಕೋವಿಡ್: ಪ್ರೇಕ್ಷಕರಿಲ್ಲದೆ ನಡೆಯಲಿದೆ ಭಾರತ–ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ

ರಾಯಿಟರ್ಸ್
Published 21 ಡಿಸೆಂಬರ್ 2021, 1:31 IST
Last Updated 21 ಡಿಸೆಂಬರ್ 2021, 1:31 IST
ಎಎಫ್‌ಪಿ ಚಿತ್ರ
ಎಎಫ್‌ಪಿ ಚಿತ್ರ   

ಜೋಹಾನ್ಸ್‌ಬರ್ಗ್: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವಿನ ಕ್ರಿಕೆಟ್ ಸರಣಿಗಳನ್ನು ಪ್ರೇಕ್ಷರಿಲ್ಲದೆ ನಡೆಸಲು ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್‌ಎ) ನಿರ್ಧರಿಸಿದೆ.

ಭಾನುವಾರ ಸೆಂಚುರಿಯನ್‌ನಲ್ಲಿ ಮೂರು ಟೆಸ್ಟ್‌ ಪಂದ್ಯಗಳ ಸರಣಿಯ ಮೊದಲ ಪಂದ್ಯ ಆರಂಭವಾಗುತ್ತಿದ್ದು, ಜನವರಿ 17ರಿಂದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿದೆ.

ಬಿಸಿಸಿಐ ಜೊತೆಗಿನ ಜಂಟಿ ಸಭೆಯಲ್ಲಿ ಮುಚ್ಚಿದ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಯಿತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ADVERTISEMENT

‘ಕೋವಿಡ್ಅಪಾಯದ ದೃಷ್ಟಿಯಿಂದ ಪ್ರವಾಸದ ಮೇಲೆ ಬೀಳಬಹುದಾದ ಯಾವುದೇ ಪರಿಣಾಮವನ್ನು ತಪ್ಪಿಸಲು ಮತ್ತು ಅಪಾಯ-ಮುಕ್ತ ಬಯೊ ಬಬಲ್ ಪರಿಸರವನ್ನು ಕಾಪಾಡಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕ್ರೀಡೆಯ ಹಿತದೃಷ್ಟಿ ಮತ್ತು ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.