ವ್ಯಕ್ತಿ ಸಾವು–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ನಗರದಲ್ಲಿ ಗುರುವಾರ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆಯ ಕ್ರಿಕೆಟ್ ಟೂರ್ನಿ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (34) ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಆರ್‌ಎಸ್‌ಐ ಕ್ರೀಡಾಂಗಣದಲ್ಲಿ ಆರಂಭವಾದ ಈ ಎರಡು ದಿನಗಳ ಟೂರ್ನಿಯಲ್ಲಿ ಕರ್ನಾಟಕ ತಂಡ ಒಂದು ರನ್‌ನಿಂದ ತಮಿಳುನಾಡು ತಂಡವನ್ನು ಸೋಲಿಸಿದ್ದು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಪಂದ್ಯದ ನಂತರ ಮಧ್ಯಾಹ್ನ ಊಟಕ್ಕೆ ಕುಳಿತುಕೊಳ್ಳುವ ಸ್ವಲ್ಪ ಮೊದಲು ಹಠಾತ್ತಾಗಿ ಅವರು ಕುಸಿದುಬಿದ್ದರು ಎಂದು ತಂಡದ ಸಿಬ್ಬಂದಿ ಒಬ್ಬರು ತಿಳಿಸಿದರು.
ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿದ್ದ ಅವರು 25 ವರ್ಷದೊಳಗಿನವರ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಕೆಪಿಎಲ್ ಟೂರ್ನಿಯಲ್ಲೂ ಆಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.