ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ಯುವನಟ ಸಮರಜಿತ್ ಲಂಕೇಶ್
ಬೆಂಗಳೂರು: ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ಯುವನಟ ಸಮರಜಿತ್ ಲಂಕೇಶ್ ಅವರ ಜೊತೆ ವೇದಿಕೆಯಲ್ಲಿ ಕುಣಿದಿದ್ದಾರೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ.
ಭರ್ಜರಿ ಸ್ಟೆಪ್ಸ್ ಹಾಕಿರುವ ಶ್ರೇಯಾಂಕಾ ನೃತ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶ್ರೇಯಾಂಕಾ ಅವರು ವಿಡಿಯೊ ಹಂಚಿಕೊಂಡಿದ್ದಾರೆ.
ಅಂದಹಾಗೇ ಈ ಘಟನೆ ನಡೆದಿದ್ದು ಇತ್ತೀಚೆಗೆ ಮೈಸೂರಿನಲ್ಲಿ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ತಮ್ಮ ಹೊಸ ಚಿತ್ರ 'ಗೌರಿ'ಯ ಹಾಡು ಬಿಡುಗಡೆ ಸಮಾರಂಭ ಆಯೋಜಿಸಿದ್ದರು. ಈ ವೇಳೆ ಸಮರಜಿತ್ ಜೊತೆ ವೇದಿಕೆಯಲ್ಲಿ ಶ್ರೇಯಾಂಕಾ ಸ್ಟೆಪ್ಸ್ ಹಾಕಿದ್ದಾರೆ.
ಶ್ರೇಯಾಂಕಾ ಅವರಿಗೆ ಆರ್.ಸಿ.ಬಿ ಆರ್.ಸಿ.ಬಿ ಎಂದು ಯುವಕರು ಪ್ರೋತ್ಸಾಹ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.