ADVERTISEMENT

ಯಜುವೇಂದ್ರ ಚಾಹಲ್ ನಿಶ್ಚಿತಾರ್ಥ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 16:07 IST
Last Updated 8 ಆಗಸ್ಟ್ 2020, 16:07 IST
ಯಜುವೇಂದ್ರ ಚಾಹಲ್ ಮತ್ತು ಧನಶ್ರೀ  –ಟ್ವಿಟರ್ ಚಿತ್ರ
ಯಜುವೇಂದ್ರ ಚಾಹಲ್ ಮತ್ತು ಧನಶ್ರೀ  –ಟ್ವಿಟರ್ ಚಿತ್ರ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಲೆಗ್‌ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರು ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರೊಂದಿಗೆ ಶನಿವಾರ ವಿವಾಹ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ.

’ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಹೊಸ ಜೀವನದತ್ತ ಹೆಜ್ಜೆ ಇಟ್ಟಿದ್ದೇನೆ. ಧನಶ್ರೀಯೊಂದಿಗೆ ಮದುವೆ ನಿಶ್ಚಯವಾಗಿದೆ‘ ಎಂದು ಚಾಹಲ್ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾರೆ.

ಧನಶ್ರೀ ಅವರು ತಾವು ನೃತ್ಯ ನಿರ್ದೇಶಕಿ, ವೈದ್ಯ ಮತ್ತು ಯೂಟ್ಯೂಬರ್‌ ಎಂದು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಯಜುವೇಂದ್ರ ಚಾಹಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಾರೆ. ದೆಹಲಿಯ ಚಾಹಲ್ ಅವರು ಈಚೆಗೆ ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ನೃತ್ಯ, ಹಾಡು ಮತ್ತು ಚೇಷ್ಟೆಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿದ್ದರು. ಆನ್‌ಲೈನ್‌ ಚೆಸ್ ಆಡುವ ಮೂಲಕ ಕೋವಿಡ್–19 ಸಂತ್ರಸ್ತರ ನಿಧಿಗೆ ದೇಣಿಗೆ ಸಂಗ್ರಹಕ್ಕೂ ಕೈಜೋಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.