ADVERTISEMENT

ಐಸಿಸಿ ಅಧ್ಯಕ್ಷ ಸ್ಥಾನ: ಸಿಎಸ್‌ಎದಲ್ಲಿ ಒಡಕು

ಪಿಟಿಐ
Published 22 ಮೇ 2020, 19:30 IST
Last Updated 22 ಮೇ 2020, 19:30 IST
ಐಸಿಸಿ
ಐಸಿಸಿ   

ಜೊಹಾನ್ಸ್‌ಬರ್ಗ್ : ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಬೆಂಬಲಿಸುವ ವಿಷಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಸೂಕ್ತ ವ್ಯಕ್ತಿ ಎಂದು ಮಂಡಳಿಯ ನಿರ್ದೇಶಕ ಗ್ರೇಮ್‌ ಸ್ಮಿತ್ ಗುರುವಾರ ಅಭಿಪ್ರಾಯಪಟ್ಟಿದ್ದರು. ಆದರೆ ಅವರ ಅಭಿಪ್ರಾಯಕ್ಕೆ ಸಹಮತ ಇಲ್ಲ ಎಂದು ಅಧ್ಯಕ್ಷ ಕ್ರಿಸ್ ನೆನ್ಜಾನಿ ಶುಕ್ರವಾರ ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಐಸಿಸಿಯನ್ನು ಮುನ್ನಡೆಸಲು ‘ಕ್ರಿಕೆಟ್ ಮ್ಯಾನ್’ ಗಂಗೂಲಿಗೆ ಮಾತ್ರ ಸಾಧ್ಯ ಎಂದು ಸ್ಮಿತ್ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆನ್ಜಾನಿ ‘ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಬೆಂಬಲಿಸಬೇಕು ಎಂಬುದನ್ನು ನಿರ್ಧರಿಸುವಾಗ ಕೆಲವು ಶಿಷ್ಟಾಚಾರಗಳನ್ನು ಪಾಲಿಸಬೇಕು’ ಎಂದಿದ್ದಾರೆ.

‘ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇನ್ನೂ ಯಾರ ಹೆಸರು ಪ್ರಸ್ತಾಪಗೊಂಡಿಲ್ಲ. ಆಯ್ಕೆ ಪ್ರಕ್ರಿಯೆ ಆರಂಭಗೊಂಡಾಗ ಯಾರ ಪರ ನಿಲ್ಲಬೇಕು ಎಂಬುದನ್ನು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಿರ್ಧರಿಸಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಅಧ್ಯಕ್ಷ ಶಶಾಂಕ್ ಮನೋಹರ್ ಅವರ ಅವಧಿ ಈ ತಿಂಗಳಲ್ಲಿ ಕೊನೆಗೊಳ್ಳಲಿದೆ. ಆದರೆ ಕೊರೊನಾ ಹಾವಳಿಯ ಗೊಂದಲದಿಂದಾಗಿ ಅವರನ್ನು ಎರಡು ತಿಂಗಳು ಮುಂದುವರಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.