ADVERTISEMENT

PAK vs AUS: ಭಾಂಗ್ರಾ ನೃತ್ಯ ಮಾಡಿ ಸಂಭ್ರಮಿಸಿದ ಡೇವಿಡ್ ವಾರ್ನರ್, ವಿಡಿಯೊ ವೈರಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮಾರ್ಚ್ 2022, 12:16 IST
Last Updated 8 ಮಾರ್ಚ್ 2022, 12:16 IST
ಡೇವಿಡ್ ವಾರ್ನರ್‌ (ಪಿಸಿಬಿ ಟ್ವಿಟರ್‌ ಚಿತ್ರ)
ಡೇವಿಡ್ ವಾರ್ನರ್‌ (ಪಿಸಿಬಿ ಟ್ವಿಟರ್‌ ಚಿತ್ರ)   

ನವದೆಹಲಿ: ಪಾಕಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದ ವೇಳೆ ಭಾಂಗ್ರಾ ನೃತ್ಯ ಮಾಡುವ ಮೂಲಕ ಆಸ್ಟ್ರೇಲಿಯಾ ತಂಡದ ಪ್ರಮುಖಬ್ಯಾಟರ್ ಡೇವಿಡ್ ವಾರ್ನರ್‌ ಗಮನ ಸೆಳೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ವಾರ್ನರ್‌, ಸಿನಿಮಾ ಹಾಡುಗಳಿಗೆ ರೀಲ್ಸ್‌ ಸೇರಿದಂತೆ ನೃತ್ಯ ಮಾಡಿರುವ ವಿಡಿಯೊ ಮತ್ತು ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಪಾಕ್‌ ಪಂದ್ಯದ ವೇಳೆ ವಾರ್ನರ್‌ ಮಾಡಿರುವ ನೃತ್ಯದ ವಿಡಿಯೊವನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ADVERTISEMENT

ಈ ವಿಡಿಯೊವನ್ನು 13 ಸಾವಿರಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕ್‌, ಮೊದಲ ಇನ್ನಿಂಗ್ಸ್‌ನಲ್ಲಿ 162 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 476 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

477 ರನ್‌ ಗಳ ಬೃಹತ್ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ 140.1 ಓವರ್‌ಗಳಲ್ಲಿ 459 ರನ್‌ ಗಳಿಸಿ ಆಲೌಟ್‌ ಆಗಿತ್ತು.

ಈ ಮೂಲಕ 17 ರನ್‌ಗಳ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್‌ ಆರಂಭಿಸಿದ ಪಾಕ್ ಐದನೇ ದಿನದಾಟ ಅಂತ್ಯಕ್ಕೆ 77 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 252 ರನ್ ಗಳಿಸಿದೆ. ಪಂದ್ಯ ಡ್ರಾನಲ್ಲಿ ಮುಕ್ತಾಯಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.