ADVERTISEMENT

ಡೇಲ್ ಸ್ಟೇನ್ ಅಲಭ್ಯ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2019, 19:45 IST
Last Updated 25 ಏಪ್ರಿಲ್ 2019, 19:45 IST
ಡೇಲ್ ಸ್ಟೇನ್
ಡೇಲ್ ಸ್ಟೇನ್   

ಬೆಂಗಳೂರು: ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ವೇಗದ ಬೌಲರ್ ಡೇಲ್ ಸ್ಟೇನ್ ಅವರು ಗಾಯಗೊಂಡಿದ್ದು, ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಬುಧವಾರ ಭುಜದ ನೋವಿನಿಂದ ಬಳಲಿದ್ದ ಅವರು ಕಿಂಗ್ಸ್‌ ಇಲೆವನ್ ಪಂಜಾಬ್ ಎದುರಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ದಕ್ಷಿಣ ಆಫ್ರಿಕಾದ ಡೇಲ್ ಅವರು ನೇಥನ್ ಕೌಲ್ಟರ್‌ ನೈಲ್ ಬದಲಿಗೆ ತಂಡಕ್ಕೆ ಸೇರ್ಪಡೆಯಾಗಿದ್ದರು.

‘ಸ್ಟೇನ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆಯೆಂದು ವೈದ್ಯರು ತಿಳಿಸಿದ್ದಾರೆ. ಆಧ್ದರಿಂದ ಅವರು ಮುಂದಿನ ಪಂದ್ಯಗಳಲ್ಲಿ ಅವರು ಆಡುವುದಿಲ್ಲ’ ಎಂದು ಆರ್‌ಸಿಬಿ ಫ್ರ್ಯಾಂಚೈಸ್ ಮುಖ್ಯಸ್ಥ ಸಂಜೀವ್ ಚೂರಿವಾಲಾ ತಿಳಿಸಿದ್ದಾರೆ.

ADVERTISEMENT

ಸ್ಟೇನ್ ಅವರು ಕೋಲ್ಕತ್ತ ನೈಟ್ ರೈಡರ್ಸ್‌ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ಎದುರಿನ ಪಂದ್ಯಗಳಲ್ಲಿ ಆಡಿದ್ದರು. ಅವುಗಳಲ್ಲಿ ಆರ್‌ಸಿಬಿ ಗೆದ್ದಿತು. ಅವರು ಒಟ್ಟು ನಾಲ್ಕು ವಿಕೆಟ್ ಗಳಿಸಿದ್ದರು.

ತಂಡದ ಇನ್ನೊಬ್ಬ ಆಲ್‌ರೌಂಡರ್,ಇಂಗ್ಲೆಂಡ್‌ನ ಮೋಯಿನ್ ಅಲಿ ಅವರು ತಮ್ಮ ತವರಿಗೆ ಮರಳಿದ್ದಾರೆ. ಇಂಗ್ಲೆಂಡ್ ತಂಡವು ಪಾಕಿಸ್ತಾನ ವಿರುದ್ಧ ಆಡಲಿರುವ ಸರಣಿಯಲ್ಲಿ ಅವರು ಕಣಕ್ಕಿಳಿಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.