ಯಜುವೇಂದ್ರ ಚಹಲ್, ಧನಶ್ರೀ ವರ್ಮಾ
ಚಿತ್ರ ಕೃಪೆ: ಇನ್‌ಸ್ಟಾಗ್ರಾಂ
ಮುಂಬೈ: ವಿಚ್ಛೇದನ ವದಂತಿಗಳ ನಡುವೆಯೇ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ಪತ್ನಿ ನಟಿ, ನೃತ್ಯ ನಿರ್ದೇಶಕಿ ಧನಶ್ರೀ ವರ್ಮಾ ಅವರು ಇನ್‌ಸ್ಟಾಗ್ರಾಂನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ.
ಚಹಲ್ ಅವರು ಧನಶ್ರೀ ಅವರೊಂದಿಗಿನ ಎಲ್ಲಾ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಅಳಿಸಿ ಹಾಕಿದ್ದಾರೆ. ಆದರೆ, ಚಹಲ್ ಅವರನ್ನು ಅನ್‌ಫಾಲೋ ಮಾಡಿರುವ ಧನಶ್ರೀ ಅವರೊಂದಿಗಿನ ಫೋಟೊಗಳನ್ನು ಈವರೆಗೆ ಅಳಿಸಿ ಹಾಕಿಲ್ಲ.
‘ವಿಚ್ಛೇದನ ಅನಿವಾರ್ಯವಾಗಿದ್ದು, ದಂಪತಿ ತಮ್ಮ ಜೀವನವನ್ನು ಪ್ರತ್ಯೇಕವಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ. ಸ್ವಲ್ಪ ಸಮಯದ ನಂತರ ವಿಚ್ಛೇದ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ’ ಎಂದು ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
2023ರಲ್ಲಿ ಧನಶ್ರೀ ಅವರು ಇನ್‌ಸ್ಟಾಗ್ರಾಂ ಯುಸರ್ ನೇಮ್‌ನಿಂದ ‘ಚಹಲ್’ ಅನ್ನು ಕೈಬಿಟ್ಟ ನಂತರ ವಿಚ್ಛೇದನ ವದಂತಿಗಳು ಹರಿದಾಡಿದ್ದವು. ಆದರೆ, ಈ ವದಂತಿಯನ್ನು ಆಗ ಯಜುವೇಂದ್ರ ಚಹಲ್ ನಿರಾಕರಿಸಿದ್ದರು.
ಲಾಕ್‌ಡೌನ್ ಸಮಯದಲ್ಲಿ ಪರಸ್ಪರ ಪರಿಚಯವಾಗಿದ್ದ ಚಹಲ್ ಮತ್ತು ಧನಶ್ರೀ, 2020ರ ಡಿಸೆಂಬರ್ 11ರಂದು ವಿವಾಹವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.