ADVERTISEMENT

ಧೋನಿ ತಂದೆ, ತಾಯಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 16:50 IST
Last Updated 21 ಏಪ್ರಿಲ್ 2021, 16:50 IST
ಮಹೇಂದ್ರ ಸಿಂಗ್ ಧೋನಿ
ಮಹೇಂದ್ರ ಸಿಂಗ್ ಧೋನಿ   

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮುನ್ನಡೆಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರ ತಂದೆ ಹಾಗೂ ತಾಯಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ರಾಂಚಿಯ ಪಲ್ಸ್ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಈ ವಿಷಯವನ್ನು ತಿಳಿಸಿದೆ. ‘ಧೋನಿ ಅವರ ತಂದೆ ಮತ್ತು ತಾಯಿಗೆ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿ ಸಲಾಗಿದೆ. ಅವರ ಆಮ್ಲಜನಕದ ಮಟ್ಟ ಸ್ಥಿರವಾಗಿದೆ’ ಎಂದು ಆಸ್ಪತ್ರೆ ನೀಡಿರುವ ಹೇಳಿಕೆಯನ್ನು ವಿವಿಧ ಕ್ರೀಡಾ ವೆಬ್‌ಸೈಟ್‌ಗಳು ಉಲ್ಲೇಖಿಸಿ ಟ್ವೀಟ್ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT