ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಹೇಂದ್ರಸಿಂಗ್ ಧೋನಿ
–ಪಿಟಿಐ ಚಿತ್ರ
ನವದೆಹಲಿ: ಐಪಿಎಲ್‌ನಲ್ಲಿ ಮೊದಲ ಬಾರಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಪರಿಚಯಿಸಿದಾಗ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರಿಗೆ ಇದರ ಅಗತ್ಯ ಮನವರಿಕೆಯಾಗಿರಲಿಲ್ಲ. ಆದರೆ ಇದೀಗ ಈ ನಿಯಮವು ಟಿ20 ಕ್ರಿಕೆಟ್ ವಿಕಸನದ ಭಾಗವೆಂಬುದು ಅವರು ಮನಗಂಡಿದ್ದಾರೆ.
43 ವರ್ಷ ವಯಸ್ಸಿನ ಧೋನಿ ಅವರು ಕಳೆದ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ತ್ಯಜಿಸಿದ್ದರೂ ತಂಡದಲ್ಲಿ ಪ್ರಮುಖ ಶಕ್ತಿಯಾಗಿದ್ದಾರೆ. ತಂಡಕ್ಕೆ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿರುವ ಕಾರಣ ತಮ್ಮನ್ನು ಇಂಪ್ಯಾಕ್ಟ್ ಆಟಗಾರ ಎಂದು ಪರಿಗಣಿಸುವುದಿಲ್ಲ ಎಂದು ಅವರು ‘ಜಿಯೋ ಸ್ಟಾರ್’ಗೆ ಹೇಳಿದ್ದಾರೆ.
ಈ ಹಿಂದೆ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸೇರಿದಂತೆ ಅನೇಕರು ಟೀಕಿಸಿದ್ದು, ಇದು ಆಲ್‌ರೌಂಡರ್‌ಗಳ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದಿದ್ದರು.
‘ಆಟದಲ್ಲಿ ನನ್ನನ್ನು ತೊಡಗಿಸಿಕೊಳ್ಳಬೇಕಾಗುತ್ತದೆ. ಈ ನಿಯಮದಿಂದ ಪಂದ್ಯದಲ್ಲಿ ಹೆಚ್ಚಿನ ರನ್‌ಗಳಿಗೆ ದಾರಿಯಾಗುತ್ತದೆ ಎಂದು ಕೆಲವರು ಹೇಳುತ್ತಿದ್ದಾರೆ. ಇದು ಪರಿಸ್ಥಿತಿ ಮತ್ತು ಆಟಗಾರರ ಅಂದಿನ ಗುಣಧರ್ಮಕ್ಕೆ ಅನುಗುಣವಾಗಿರುತ್ತದೆ’ ಎಂದರು.
ಈ ನಿಯಮದಿಂದ ಎಲ್ಲ ತಂಡಗಳಿಗೆ ನಿರ್ಣಾಯಕ ಸಂದರ್ಭದಲ್ಲಿ ಹೆಚ್ಚುವರಿ ಬ್ಯಾಟರ್‌ಅನ್ನು ಹೊಂದುವ ಅನುಕೂಲ ಸಿಗುತ್ತದೆ ಎಂದು ಧೋನಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.