ADVERTISEMENT

15 ಬೌಂಡರಿ, 8 ಸಿಕ್ಸರ್: ಸ್ಫೋಟಕ ಶತಕ ಸಿಡಿಸಿದ ಧ್ರುವ್ ಜುರೆಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಡಿಸೆಂಬರ್ 2025, 7:33 IST
Last Updated 30 ಡಿಸೆಂಬರ್ 2025, 7:33 IST
<div class="paragraphs"><p>ಧ್ರುವ್ ಜುರೆಲ್</p></div>

ಧ್ರುವ್ ಜುರೆಲ್

   

ಭಾರತ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ನೀರಸ ಪ್ರದರ್ಶನ ತೋರಿದ್ದರು.

ಉತ್ತರ ಪ್ರದೇಶ ಪರ ಆಡುತ್ತಿರುವ ಧ್ರುವ್ ಜುರೆಲ್ ಅವರು ಬರೋಡಾ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅವರ ಮೊದಲ ಶತಕವಾಗಿದೆ. ಜುರೇಲ್ ಶತಕದ ನೆರವಿನಿಂದ ಉತ್ತರ ಪ್ರದೇಶ ತಂಡ ಬರೋಡಾ ವಿರುದ್ಧ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 359 ರನ್ ಕಲೆಹಾಕಿತು.

ADVERTISEMENT

ನಿನ್ನೆ (ಸೋಮವಾರ) ನಡೆದ ಪಂದ್ಯದಲ್ಲಿ ಬರೋಡಾ ವಿರುದ್ಧ 101 ಎಸೆತಗಳನ್ನು ಎದುರಿಸಿದ ಧ್ರುವ್ ಜುರೆಲ್ ಅವರು 8 ಸಿಕ್ಸರ್ ಹಾಗೂ 15 ಬೌಂಡರಿಗಳ ನೆರವಿನಿಂದ ಅಜೇಯ 160 ರನ್ ಬಾರಿಸಿದರು.

ಇದು ಧ್ರುವ್ ಜುರೆಲ್ ಅವರ ಲಿಸ್ಟ್ ಎ ಏಕದಿನ ಕ್ರಿಕೆಟ್ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಹಾಗೂ ಮೊದಲ ಏಕದಿನ ಶತಕವೂ ಆಗಿದೆ. ಇದಕ್ಕೂ ಮೊದಲು ಅವರು ಲಿಸ್ಟ್ ಎ ಕ್ರಿಕೆಟ್‌ನಲ್ಲಿ 12 ಪಂದ್ಯಗಳನ್ನು ಆಡಿದ್ದು, 4 ಅರ್ಧಶತಕ ಸಹಿತ 336 ರನ್ ಗಳಿಸಿದ್ದರು.

ಧ್ರುವ್ ಜುರೆಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಉತ್ತರ ಪ್ರದೇಶ ತಂಡವು 54 ರನ್‌ಗಳ ಗೆಲುವು ಸಾಧಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.