ಪ್ರಾತಿನಿಧಿಕ ಚಿತ್ರ
ಲಂಡನ್: ಮಹಿಳೆಯರ ಮತ್ತು ಬಾಲಕಿಯರ ವಿಭಾಗಗಳ ಕ್ರಿಕೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಭಾಗವಹಿಸುವಿಕೆಯನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ನಿಷೇಧಿಸಿದೆ. ದೇಶದ ಫುಟ್‌ಬಾಲ್ ಅಸೋಸಿಯೇಷನ್ (ಎಫ್‌ಎ) ಗುರುವಾರವಷ್ಟೇ ತನ್ನ ಕ್ರೀಡೆಯ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಭಾಗವಹಿಸುವಿಕೆಯನ್ನು ನಿಷೇಧಿಸಿತ್ತು.
‘ಬಾಲಕಿಯರ ಮತ್ತು ಮಹಿಳಾ ವಿಭಾಗದ ಕ್ರಿಕೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶವಿಲ್ಲ. ಓಪನ್ ಮತ್ತು ಮಿಶ್ರ ತಂಡಗಳ ಕ್ರಿಕೆಟ್‌ನಲ್ಲಿ ಅವರು ಆಡಬಹುದಾಗಿದೆ. ಈ ನಿಯಮವು ತತ್‌ಕ್ಷಣದಿಂದ ಜಾರಿಗೆ ಬರಲಿದೆ’ ಎಂದು ಇಸಿಬಿ ಶುಕ್ರವಾರ ಪ್ರಕಟಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.