ಬ್ಯಾಟಿಂಗ್ ವೇಳೆ ಜೋ ರೂಟ್ ಹಾಗೂ ಬೆನ್ ಸ್ಟೋಕ್ಸ್
ಪಿಟಿಐ ಚಿತ್ರ
ಮ್ಯಾಂಚೆಸ್ಟರ್: ಪರಿಣತ ಬ್ಯಾಟರ್ ಜೋ ರೂಟ್ ಹಾಗೂ ನಾಯಕ ಬೆನ್ ಸ್ಟೋಕ್ಸ್ ಗಳಿಸಿದ ಅಮೋಘ ಶತಕಗಳ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡವು ಭಾರತ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬೃಹತ್ ಮುನ್ನಡೆ ಸಾಧಿಸಿದೆ.
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲ ಇನಿಂಗ್ಸ್‌ನಲ್ಲಿ 358 ರನ್ ಗಳಿಸಿ ಸರ್ವಪತನ ಕಂಡಿತ್ತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, 699 ರನ್ ಕಲೆಹಾಕಿದೆ. ಇದರೊಂದಿಗೆ, 311 ರನ್‌ಗಳ ಭಾರಿ ಮುನ್ನಡೆ ಸಾಧಿಸಿದೆ.
ಜೋ ರೂಟ್ 150 ರನ್ ಗಳಿಸಿದರೆ, ನಾಯಕ ಸ್ಟೋಕ್ಸ್ 141 ರನ್ ಬಾರಿಸಿ ನೆರವಾದರು.
ಭಾರತದ ಪರ ರವೀಂದ್ರ ಜಡೇಜ ನಾಲ್ಕು ವಿಕೆಟ್ ಉರುಳಿಸಿದರೆ, ಜಸ್‌ಪ್ರೀತ್ ಬೂಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಮೊಹಮ್ಮದ್ ಸಿರಾಜ್ ಮತ್ತು ಅನ್ಶುಲ್ ಕಾಂಬೋಜ್ ಒಂದೊಂದು ವಿಕೆಟ್ ಹಂಚಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.