ಕ್ರಿಕೆಟ್
(ಸಾಂಕೇತಿಕ ಚಿತ್ರ)
ಸೌತಾಂಪ್ಟನ್: ಜೋಫ್ರಾ ಆರ್ಚರ್ ಅವರ ಪರಿಣಾಮಕಾರಿ ಬೌಲಿಂಗ್ (18ಕ್ಕೆ 4) ಮತ್ತು ಜೇಕಬ್ ಬೆಥೆಲ್ (110;82ಎ)ಅವರ ಚೊಚ್ಚಲ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ಮೂರನೇ ಏಕದಿನ ಪಂದ್ಯದಲ್ಲಿ ದಾಖಲೆ 342 ರನ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು.
ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ರನ್ ಆಧಾರದಲ್ಲಿ ಅತಿ ದೊಡ್ಡ ಅಂತರದ ಗೆಲುವಾಗಿದೆ. 2023ರಲ್ಲಿ ಭಾರತವು ಶ್ರೀಲಂಕಾ ವಿರುದ್ಧ 317 ರನ್‌ಗಳಿಂದ ಗೆದ್ದಿರುವುದು ಈತನಕದ ದಾಖಲೆಯಾಗಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು ಬೆಥೆಲ್ ಮತ್ತು ಜೋ ರೂಟ್ (100;96ಎ) ಅವರ ಶತಕಗಳ ನೆರವಿನಿಂದ 50 ಓವರ್‌ಗಳಿಗೆ 415 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 20.5 ಓವರ್‌ಗಳಲ್ಲಿ 72 ರನ್ ಗಳಿಸಿ ಹೋರಾಟ ಮುಗಿಸಿತು.
ಈ ಸೋಲಿನ ಹೊರತಾಗಿಯೂ ದಕ್ಷಿಣ ಆಫ್ರಿಕಾ ತಂಡವು ಸರಣಿಯನ್ನು 2–1ರಿಂದ ವಶಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳನ್ನು ಪ್ರವಾಸಿ ತಂಡ ಗೆದ್ದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.