ಇಂಗ್ಲೆಂಡ್ ತಂಡದ ಬೆನ್ ಡಕೆಟ್ ಹಾಗೂ ಲಿಯಾಮ್ ಲಿವಿಂಗ್‌ಸ್ಟೊನ್
ರಾಯಿಟರ್ಸ್ ಚಿತ್ರ
ಲಾಹೋರ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ 352 ರನ್‌ಗಳ ಕಠಿಣ ಗುರಿ ನೀಡಿರುವ ಇಂಗ್ಲೆಂಡ್, ವಿಶೇಷ ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.
ಲಾಹೋರ್‌ನ ಗಢಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, ಬೆನ್ ಡಕೆಟ್ ಗಳಿಸಿದ ಅಮೋಘ ಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 351 ರನ್ ಕಲೆಹಾಕಿದೆ.
ಇದು ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯವೊಂದರಲ್ಲಿ ಯಾವುದೇ ತಂಡ ಕಲೆಹಾಕಿದ ಗರಿಷ್ಠ ಮೊತ್ತವಾಗಿದೆ. 2004ರಲ್ಲಿ ನ್ಯೂಜಿಲೆಂಡ್ ತಂಡವು ಯುಎಸ್‌ಎ ವಿರುದ್ಧ 4 ವಿಕೆಟ್‌ಗೆ 347 ರನ್ ಗಳಿಸಿದ್ದು ಈವರೆಗೆ ದಾಖಲೆಯಾಗಿತ್ತು.
ಪಾಕಿಸ್ತಾನ ತಂಡ 2017ರಲ್ಲಿ ಭಾರತದ ವಿರುದ್ಧ 4 ವಿಕೆಟ್‌ಗೆ 338 ರನ್ ಗಳಿಸಿತ್ತು. ನಾಲ್ಕನೇ ಸ್ಥಾನದಲ್ಲಿ ಭಾರತ ಇದೆ. 2013ರಲ್ಲಿ ಎಂ.ಎಸ್. ಧೋನಿ ನಾಯಕತ್ವದಲ್ಲಿ ಆಡಿದ್ದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್‌ಗೆ 331 ರನ್ ಕಲೆಹಾಕಿತ್ತು.
ಚಾಂಪಿಯನ್ಸ್ ಟ್ರೋಫಿಯಲ್ಲಿ ಗರಿಷ್ಠ ಮೊತ್ತ ಕಲೆಹಾಕಿದ ತಂಡಗಳು
ಆಸ್ಟ್ರೇಲಿಯಾ ಎದುರು ಇಂಗ್ಲೆಂಡ್ 351/8 (2025)
ಯುಎಸ್‌ಎ ಎದುರು ನ್ಯೂಜಿಲೆಂಡ್ 347/4 (2004)
ಭಾರತದ ಎದುರು ಪಾಕಿಸ್ತಾನ 338/4 (2017)
ದಕ್ಷಿಣ ಆಫ್ರಿಕಾ ಎದುರು ಭಾರತ 331/7 (2013)
ದಕ್ಷಿಣ ಆಫ್ರಿಕಾ ಎದುರು ಇಂಗ್ಲೆಂಡ್ 323/8 (2009)
ಭಾರತದ ಎದುರು ಶ್ರೀಲಂಕಾ 322/3 (2017)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.