
ಕೋಲ್ಕತ್ತ: ಟಿ20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡವು, ನಾಯಕ ರಿಚೀ ಬೆರಿಂಗ್ಟನ್ (49 ರನ್: 32 ಎಸೆತ) ಅವರ ಬ್ಯಾಟಿಂಗ್ ನೆರವಿನಿಂದ 19.4 ಓವರ್‌ಗಳಲ್ಲಿ 152 ರನ್ ಗಳಿಸಿತು.
153 ರನ್ ಗುರಿ ಬೆನ್ನಟಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿತು. ಫಿಲ್ ಸಾಲ್ಟ್ (2 ರನ್), ಜೋಸ್ ಬಟ್ಲರ್ (3 ರನ್) ವೈಫಲ್ಯ ಅನುಭವಿಸಿದರು.
13 ರನ್‌ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಜಾಕೋಬ್ ಬೆಥೆಲ್ (32 ರನ್; 28 ಎಸೆತ) ಹಾಗೂ ಟಾಮ್ ಬಾಥಮ್ (63 ರನ್; 41 ಎಸೆತ) ಆಸರೆಯಾದರು. ಹ್ಯಾರಿ ಬ್ರೂಕ್ ಪಡೆಯು 18.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಇಂಗ್ಲೆಂಡ್ ಪರ ಆದಿಲ್ ರಶೀದ್ 3 ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ತಂಡವು ಆಡಿರುವ 3 ಪಂದ್ಯಗಳಲ್ಲಿ 2ರಲ್ಲಿ ಗೆಲುವು ಸಾಧಿಸುವ ಮೂಲಕ 4 ಪಾಯಿಂಟ್‌ಗಳೊಂದಿಗೆ ಸಿ ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.