ADVERTISEMENT

ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ಎಲ್ಲ ಮಾದರಿ ಕ್ರಿಕೆಟ್‌ನಿಂದ ನಿವೃತ್ತಿ?

ಏಜೆನ್ಸೀಸ್
Published 2 ನವೆಂಬರ್ 2020, 12:08 IST
Last Updated 2 ನವೆಂಬರ್ 2020, 12:08 IST
ಶೇನ್ ವ್ಯಾಟ್ಸನ್
ಶೇನ್ ವ್ಯಾಟ್ಸನ್   

ಚೆನ್ನೈ: ಆಸ್ಟ್ರೇಲಿಯಾ ಕ್ರಿಕೆಟ್‌ನ ಆಲ್‌ರೌಂಡರ್‌ ಆಟಗಾರ ಶೇನ್ ವ್ಯಾಟ್ಸನ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದಾರೆ ಎಂದು ವರದಿಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಡ್ರೆಸ್ಸಿಂಗ್ ಕೊಠಡಿಯಲ್ಲಿ ತಮ್ಮ ನಿವೃತ್ತಿ ನಿರ್ಧಾರ ಪ್ರಕಟಿಸುವಾಗ ವ್ಯಾಟ್ಸನ್ ಭಾವುಕರಾಗಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬರಬೇಕಿದೆ.

ADVERTISEMENT

ವ್ಯಾಟ್ಸನ್ ಆಸ್ಟ್ರೇಲಿಯಾ ಪರ 59 ಟೆಸ್ಟ್, 190 ಏಕದಿನ ಮತ್ತು 50 ಟಿ–20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.